Breaking News

ಅನಧಿಕೃತವಾಗಿ ಪ್ರಾಣಿವಧೆ ಮತ್ತು ಅನುಮತಿ ಇಲ್ಲದೆ ಮಾಂಸ ಸಾಗಾಣಿಕೆ ನಿಷೇಧ, ಟಾಸ್ಕ್ ಪೋರ್ಸ ರಚನೆ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು ಖಡಕ್ ಎಚ್ಚರಿಕೆ.

Spread the love

ಅನಧಿಕೃತವಾಗಿ ಪ್ರಾಣಿವಧೆ ಮತ್ತು ಅನುಮತಿ ಇಲ್ಲದೆ ಮಾಂಸ ಸಾಗಾಣಿಕೆ ನಿಷೇಧ, ಟಾಸ್ಕ್ ಪೋರ್ಸ ರಚನೆ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು ಖಡಕ್ ಎಚ್ಚರಿಕೆ.
ಧಾರವಾಡ :ಬರುವ ಜೂ.7 ರಂದು ಬಕ್ರಿದ್ ಹಬ್ಬವನ್ನು ಶಾಂತಿಯುತವಾಗಿ ಜಿಲ್ಲೆಯ ಸಾರ್ವಜನಿಕರು ಆಚರಿಸಬೇಕು. ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ಪ್ರಕಾರ ನೋಂದಾಯಿತ ವಧಾಗಾರದಲ್ಲಿ ಮಾತ್ರ ಅನುಮತಿ ಇರುವ ಪ್ರಾಣಿಗಳನ್ನು ವಧೆ ಮಾಡಲು ಅವಕಾಶವಿದೆ. ಅನಧಿಕೃತ ಪ್ರಾಣಿ ವಧೆ ಹಾಗೂ ಮಾಂಸ ಸಾಗಾಣಿಕೆ ನಿಷೇಧ ಎಂದು ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆಗಳನ್ನು ತಡೆಗಟ್ಟುವ ಜಿಲ್ಲಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಖಡಕ್ ಎಚ್ಚರಿಕೆ ನೀಡಿದ್ದಾರೆ.‌
ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರ ಪರಿಣಾಮಕಾರಿ ಅನುಷ್ಠಾನ ಮತ್ತು ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆಗಳನ್ನು ತಡೆಗಟ್ಟುವ ಜಿಲ್ಲಾ ಸಮಿತಿ ಸಭೆ ಜರುಗಿಸಿ, ಮಾತನಾಡಿದರು ಅವರು, ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ದ ಪ್ರಕಾರ 13 ವರ್ಷ ಮೇಲ್ಪಟ್ಟ ಎಮ್ಮೆ ಮತ್ತು ಕೋಣಗಳನ್ನು ಮಾತ್ರ ವಧೆ ಮಾಡಲು ಅವಕಾಶವಿದೆ. ಎತ್ತು, ಆಕಳು ಮತ್ತು ಕರು ಇವುಗಳನ್ನು ವಧೆ ಮಾಡಲು ಅವಕಾಶವಿರುವುದಿಲ್ಲ. ಈ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅನಧಿಕೃತ ವಧಾಲಯಗಳನ್ನು ಗುರುತಿಸಿ, ಸೀಜ್ ಮಾಡಲು ಮತ್ತು ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.
ಬರುವ ಜೂನ್ 7 ರಂದು ಜರಗುವ ಹಬ್ಬದ ಹಿನ್ನಲೆಯಲ್ಲಿ ಪ್ರಾಣಿ ವಧೆ ಕುರಿತು ಸರಿಯಾದ ಜಾಗೃತಿ ಮೂಡಿಸಬೇಕು. ಅವಳಿ ನಗರ ಹಾಗೂ ಜಿಲ್ಲೆಯ ಗ್ರಾಮೀಣ ಭಾಗದ ನಗರ ಪಟ್ಟಣಗಳಲ್ಲಿ ಅನಧಿಕೃತವಾಗಿ ಯಾವುದೇ ವಧಾಲಯ ತೆರೆಯದಂತೆ ಮುಂಜಾಗ್ರತೆ ವಹಿಸಬೇಕು. ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕೆಂದು ಅವರು ಸೂಚಿಸಿದರು.
ಟಾಸ್ಕ್ ಪೋರ್ಸ್ ರಚಿಸಿ ಆದೇಶ: ಜಿಲ್ಲೆಯ ಮಹಾನಗರ, ಎಲ್ಲ ನಗರ ಪಟ್ಟಣಗಳ ಹಾಗೂ ಇತರ ಪ್ರದೇಶಗಳಲ್ಲಿ ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರ ಉಲ್ಲಂಘನೆ ಆಗದಂತೆ ಮುಂಜಾಗ್ರತೆ ವಹಿಸಲು ಪ್ರತಿ ತಾಲೂಕಿಗೆ ಆಯಾ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿಗಳನ್ನು ರಚಿಸಿ, ಆದೇಶಿಸಲಾಗಿದೆ.
ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ತಹಶೀಲ್ದಾರರು, ಪೊಲೀಸ್ ಅಧಿಕಾರಿ, ತಾಲೂಕಾ ಪಂಚಾಯತ ಇಓ, ಪಾಲಿಕೆ ಅಥವಾ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿ, ಪಶು ಸಂಗೋಪನೆ ಇಲಾಖೆಯ ವೈದ್ಯರು ಇರುತ್ತಾರೆ. ಪ್ರತಿ ಸಮಿತಿಯು ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿನ ಪ್ರಾಣಿ ವಧಾಲಯಗಳ ಬಗ್ಗೆ ಮಾಹಿತಿ ಪಡೆದು, ಪರಿಶೀಲಿಸಬೇಕು. ನೋಂದಣಿಯಾಗದೇ ಅನಧಿಕೃತವಾಗಿ ಪ್ರಾಣಿ ವಧಾಲಯ ಆರಂಭಿಸಿದ್ದಲ್ಲಿ ತಕ್ಷಣ ಸೀಜ್ ಮಾಡಿ, ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಬಿಡಾಡಿ ದನಗಳು ಇದ್ದಲ್ಲಿ, ಅವುಗಳನ್ನು ರಕ್ಷಿಸಿ, ಹತ್ತಿರದ ಗೋಶಾಲೆಗೆ ಬಿಡಬೇಕು. ಈ ಕುರಿತು ಸಂಬಂಧಿಸಿದವರು ಅಗತ್ಯ ದಾಖಲೆಗಳನ್ನು, ಫೋಟೊ, ವಿಡಿಯೋಗಳನ್ನು ಮಾಡಬೇಕು. ಮಾಲೀಕರು ತಮ್ಮ ಜಾನುವಾರುಗಳನ್ನು ರಕ್ಷಿಸಿಕೊಳ್ಳದೇ ಬೀದಿಗೆ ಬಿಟ್ಟಿದ್ದಲ್ಲಿ ಅಂತಹ ಜಾನುವಾರುಗಳನ್ನು ವಶಕ್ಕೆ ಪಡೆದು, ಗೋಶಾಲೆಗೆ ಕಳುಹಿಸಬೇಕು ಮತ್ತು ಅಂತಹ ಮಾಲೀಕರಿಗೆ ಹೆಚ್ಚಿನ ಪ್ರಮಾಣದಲ್ಲಿ ದಂಡ ವಿಧಿಸಿ, ಅವರ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರ ಪ್ರಕಾರ ಕಾನೂನು ಕ್ರಮಕೈಗೊಳ್ಳಬೇಕು. ಕಾನೂನು ಅನುಮತಿಸಿರುವ ಕನಿಷ್ಠ 3 ಲಕ್ಷ ದಂಡ ಹಾಗೂ 5 ವರ್ಷದ ವರೆಗಿನ ಕನಿಷ್ಠ ಶಿಕ್ಷೆಯಾಗುವಂತೆ ಮಾಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ