ಗದಗ: ಈಗಾಗಲೇ ಅಧಿಕಾರ ಕಳೆದುಕೊಂಡು, ದೇಶಕ್ಕೆ ಬೆಂಕಿ ಇಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಸಿಎನ್ಎ ಕಾನೂನು ತಂದಾಗ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲಾ ಬಿಜೆಪಿ ಕಾರ್ಯಾಲಯ ಭವನ ಶಿಲಾನ್ಯಾಸದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲ್ ಅವರು ಕಾಂಗ್ರೇಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ ಪ್ರಕರಣದ ಹಿಂದೆ ಕಾಂಗ್ರೆಸ್ ಇತ್ತು ಎಂದು ಆರೋಪಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಪ್ರವೃತ್ತಿಗೆ ಬಂದಿದ್ದು ಈಗ ಇಲ್ಲಿಗೆ ಹೋಗಿದೆ. ಕಾಂಗ್ರೆಸ್ ಅಧ್ಯಕ್ಷರು ಭ್ರಷ್ಟಾಚಾರ ಕೇಸ್ ನಲ್ಲಿ ಸಿಬಿಐ ನಲ್ಲಿದ್ದಾರೆ. ಇನ್ನೊಬ್ಬರು ಕ್ರಿಮಿನಲ್ ಕೇಸ್ ಒಳಗಡೆ ಜೈಲಿನಲ್ಲಿದ್ದಾರೆ. ಇಡೀ ದೇಶವೇ ನಾಚುವಂತಹ ಕೆಲಸವನ್ನು ವಿಧಾನ ಪರಿಷತ್ ಒಳಗಡೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಮಾನ ಮರ್ಯಾದೆ ಇದ್ದರೆ ರಾಜ್ಯದ ಜನರಲ್ಲಿ ಕ್ಷಮೆ ಕೇಳಿ ಎಂದು ನಳಿನ್ ಕುಮಾರ್ ಆಕ್ರೋಶ ಹೊರಹಾಕಿದರು.
ಸಿಎಂ ಮನೆ, ನಮ್ಮ ಮನೆಗೆ ಅರ್ಜಿ ಹಿಡಿದುಕೊಂಡು ತಿರುಗೋರ ಅರ್ಜಿ ನೋಡಿ ನಾವು ಸ್ಥಾನ ಮಾನ ನೀಡಿಲ್ಲ. ನಾವು ಮತಗಟ್ಟೆಯಲ್ಲಿ ಎಷ್ಟು ಕೆಲಸ ಮಾಡಿದ್ದಾನೆ ಎಂದು ನೋಡಿಕೊಂಡು ಜವಾಬ್ದಾರಿ ನೀಡುತ್ತೇವೆ. ಕಾಂಗ್ರೆಸ್ ಗಾಂಧಿ ಹೆಸರಿನಲ್ಲಿ ರಾಜಕೀಯ ಮಾಡಿದೆ. ಕಾಂಗ್ರೆಸ್ ಲೋಕಸಭೆಯಲ್ಲಿ ಬದುಕಲು ನಾಲಾಯಕ್ ಆಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.