ಬೆಂಗಳೂರು, ಜೂನ್ 08: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ,ವಿಜಯಪುರ, ಚಿಕ್ಕಬಳ್ಳಾಪುರ,ದಾವಣಗೆರೆ, ಕೊಡಗು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕ್ಯಾಸಲ್ರಾಕ್,ಯಲಬುರ್ಗಾ, ಬೀದರ್, ವಿಜಯಪುರದಲ್ಲಿ ಮಳೆಯಾಗಿದೆ.ಎಚ್ಎಎಲ್ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.