Breaking News

ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ‌ ಶ್ಲಾಘನೆ

Spread the love

ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ‌ ಶ್ಲಾಘನೆ
12ನೇ ಶತಮಾನದಲ್ಲಿ ಬಸವಣ್ಣನವರು ಜನಸಮಾನ್ಯರ ಆಡು ಭಾಷೆಯಲ್ಲಿ ರಚಿಸಿದ ವಚನಗಳನ್ನು ಇದೀಗ ವಿಜಯಪುರದ ಪೊಲೀಸ್ ಅಧಿಕಾರಿ ಡಿವೈಎಸ್ಪಿ ಬಸವರಾಜ ಯಲಿಗಾರ ಅವರು ಇಂಗ್ಲಿಷ್ ಗೆ ಅನುವಾದಿಸಿರುವ ಮೈ ಮಿ ಈಸ್ ದಿ (ನನ್ನೊಳಗಿನ ನಾನು ನೀನು) ಪುಸ್ತಕವನ್ನು ನಗರದಲ್ಲಿ ಇಂದು ಸಂಸದರ ರಮೇಶ ಜಿಗಜಿಣಗಿ ಅವರ ಕಛೇರಿಗೆ ಆಗಮಿಸಿ ಪುಸ್ತಕ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಯಲ್ಲಿದ್ದುಕೊಂಡು ವಚನ ಸಾಹಿತ್ಯವನ್ನು ಕನ್ನಡದಿಂದ ಇಂಗ್ಲಿಷ್ ಗೆ ಅನುವಾದ ಮಾಡಿದ ಡಿವೈಎಸ್ಪಿ ಬಸವರಾಜ ಯಲಿಗಾರ ರವರ ಕಾರ್ಯಕ್ಕೆ ಸಂಸದರು ಶ್ಲಾಘನೆ ವ್ಯಕ್ತಪಡಿಸಿದರು. ಬಸವಣ್ಣನವರ ವಿಚಾರಗಳು ಇಡೀ ಜಗತ್ತಿನಾದ್ಯಂತ ವಿಚಾರಧಾರೆಗಳು ಪಸರಿಸಲಿ ಎಂದು ಹಾರೈಸಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಆರ್.ಎಸ್. ಪಾಟೀಲ ಕುಚಬಾಳ, ಪಾಲಿಕೆ ಸದಸ್ಯರಾದ ಮಳುಗೌಡ ಪಾಟೀಲ, ಉಪಸ್ಥಿತರಿದ್ದರು.

Spread the love

About Laxminews 24x7

Check Also

ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ: ಸಿಎಂ

Spread the loveಬೆಂಗಳೂರು: ಪ್ರತೀ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ