Breaking News

ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ

Spread the love

ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಿಣಿಯೆ ಗ್ರಾಮದಲ್ಲಿ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ನೂತನ ಕಟ್ಟಡದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.
ಸುಮಾರು 60 ಲಕ್ಷ ರೂ.ಗಳ ವೆಚ್ಚದಲ್ಲಿ ಈ ದೇವಸ್ಥಾನ ನಿರ್ಮಾಣವಾಗಲಿದೆ. ಗ್ರಾಮಸ್ಥರ ಬೇಡಿಕೆಯಂತೆ ವಿಶೇಷ ಪ್ರಯತ್ನ ಮಾಡಿ ಅನುದಾನ ಮಂಜೂರು ಮಾಡಿಸಲಾಗಿದೆ. ಈಗಾಗಲೆ ಕ್ಷೇತ್ರದಲ್ಲಿ 140ಕ್ಕೂ ಹೆಚ್ಚು ದೇವಸ್ಥಾನಗಳನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಕ್ಷೇತ್ರದಲ್ಲಿ ಓಡಾಡುವಾಗ ಯಾವುದೇ ಭಾಗಕ್ಕೆ ಹೋದರೂ ನೂತನ ದೇವಾಲಯಗಳನ್ನು ಕಣ್ತುಂಬಿಕೊಳ್ಳಲು ಸಂತೋಷವೆನಿಸುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.
ಈ ವೇಳೆ ಯುವರಾಜ ಕದಂ, ಮೃಣಾಲ್‌ ಹೆಬ್ಬಾಳಕರ್, ಸುರೇಶ ಡುಕರೆ, ಮಾರುತಿ ಡುಕರೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೇಮಂತ ಪಾಟೀಲ, ಡಾ.ಕೃಷ್ಣ ಪಾಟೀಲ, ಸುಭಾಷ್ ಡುಕರೆ, ರಾಮನಿಂಗ ದಳವಿ, ಮಹಾವೀರ ಕಿಣಗಿ, ವರ್ಷಾ ಡುಕರೆ, ನಿವೃತ್ತಿ ಡುಕರೆ, ಸಂತೋಷ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ