Breaking News

ಮಗ ನಮ್ಮ ಜೊತೆಗಿದ್ದಿದ್ದರೆ ಸಾಕಾಗಿತ್ತು. ದುಡ್ಡು ಕೊಟ್ಟರೆ ಮಗ ಮತ್ತೆ ವಾಪಸ್​ ಬರೊಲ್ಲ ಸಾರ್.. ಮುನ್ನೆಚ್ಚರಿಕೆ ವಹಿಸಬೇಕು.. ಇದು ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯ ತಂದೆಯ ನುಡಿ..

Spread the love

ತುಮಕೂರು: ಇತ್ತೀಚಿಗೆ (ಜೂನ್​ 4) ಆರ್ ಸಿಬಿ ವಿಜಯೋತ್ಸವದ ವೇಳೆ ಮೃತಪಟ್ಟ ತುಮಕೂರು ಮೂಲದ ವಿದ್ಯಾರ್ಥಿ ಮನೋಜ್ ಕುಟುಂಬಕ್ಕೆ ಸರ್ಕಾರದ ಆದೇಶದಂತೆ 25 ಲಕ್ಷ ರೂಪಾಯಿ ಹಣದ ಚೆಕ್ಅನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭಾನುವಾರ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೃತ ವಿದ್ಯಾರ್ಥಿ ಮನೋಜ್ ತಂದೆ ದೇವರಾಜ್, ಚೆಕ್ ಕೊಟ್ಟಿದಾರೆ ಸರ್.. ಮಗ ಬರೊಲ್ವಲ್ಲ. ಚೆಕ್ ಕೊಟ್ಟರೆ ಮಗಾ ಬರ್ತಾನಾ, ಇದ್ದೋನು ಒಬ್ಬನೇ ಮಗ ಎಂದು ನೊಂದು ನುಡಿದರು.

25 ಲಕ್ಷ ರೂಪಾಯಿ ಚೆಕ್ ಕೊಟ್ಟಿದ್ದಾರೆ, ಈ ಹಣ ನನ್ನ ಉಪಯೋಗಕ್ಕೆ ನಾನೇನು ಮಾಡಿಕೊಳ್ಳಲ್ಲ.
ನನ್ನ ಮಗಳು, ಅವರ ಅಮ್ಮನ ಅಕೌಂಟ್ ಗೆ ಹಾಕುತ್ತೇನೆ. ಅವರ ಜೀವನಾಂಶಕ್ಕೆ ಹಣ ಇಡುತ್ತೇನೆ ಎಂದು ಹೇಳಿದರು.

ಬಂದ ಚೆಕ್ ಹಣದ ಒಂದು ರೂಪಾಯಿ ಸಹ ಖರ್ಚು ಮಾಡಿಕೊಳ್ಳಲ್ಲ. ದುಡ್ಡು ಕೊಟ್ಟರೆ ಯಾರು ಬರೊಲ್ಲ, ಆದ್ರೆ ಕಾರ್ಯಕ್ರಮ ಆಯೋಜನೆ ಮಾಡಿದವರು ಮುನ್ನೆಚ್ಚರಿಕೆ ಕ್ರಮ ವಹಿಸಬೇಕಾಗಿತ್ತು. ನಮ್ಮಂತವರು ಎಷ್ಟೋ ಜನ ಇದ್ದಾರೆ. ಅವರ ಪರಿಸ್ಥಿತಿ ಹೇಗಿರುತ್ತೆ ಅಂತ ಯೋಚನೆ ಮಾಡಬೇಕು ಎಂದು ತಮ್ಮ ಮನವಿ ಜೊತೆ ಸಲಹೆಯನ್ನು ಅವರು ನೀಡಿದರು.

ಇನ್ನೊಂದೆರೆಡು ವರ್ಷಕ್ಜೆ ಓದು ಮುಗಿಯುತಿತ್ತು. ಕೆಲಸಕ್ಕೂ ಸಹ ಸೇರುತ್ತಿದ್ದ ಅವನು ನಮಗೆ ಬೆನ್ನೆಲುಬಾಗಿ ನಿಂತುಕೊಳ್ಳುತಿದ್ದ. ವಿದೇಶಕ್ಕೆ ಹೋಗುವ ಆಸೆ ಹೊಂದಿದ್ದ. ಅವಕಾಶ ಸಿಕ್ಕರೆ ಹೋಗು ಎಂದು ನಾನು ಹೇಳಿದ್ದೆ. ಅವನು ನಮ್ಮೆ ಜೊತೆಯಲ್ಲಿ ಇದ್ದಿದ್ದರೆ ಸಾಕಾಗುತಿತ್ತು ಎಂದು ಮೃತನ ತಂದೆ ಭಾವುಕರಾಗಿ ನುಡಿದರು.


Spread the love

About Laxminews 24x7

Check Also

ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

Spread the love ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಗ್ರಾಮೀಣ ಕ್ಷೇತ್ರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ