Breaking News

ಕುಂಭಮೇಳದಲ್ಲಿ ಕಾಲ್ತುಳಿತದಿಂದ ಜನ ಸಾವನ್ನಪ್ಪಿದಾಗ ಹೆಚ್​ಡಿಕೆಯವರು ಮೋದಿ ರಾಜೀನಾಮೆ ಕೇಳಿದ್ರಾ: ಸಿಎಂ

Spread the love

ಮೈಸೂರು: ಕುಂಭಮೇಳದಲ್ಲಿ ಕಾಲ್ತುಳಿತದಿಂದ ಹಲವು ಜನರು ಸಾವನ್ನಪ್ಪಿದಾಗ ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡಿದರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯವರು ವಿಧಾನಸೌಧದ ಆವರಣದಲ್ಲಿ ಧರಣಿ ನಡೆಸಿದ ವಿಚಾರವಾಗಿ ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕುಂಭಮೇಳದ ದುರ್ಘಟನೆ ನಡೆದಾಗ ಯಾರಾದರೂ ಪ್ರಧಾನಿಯನ್ನು ರಾಜೀನಾಮೆ ಕೇಳಿದರಾ? ಆಗ ಕುಮಾರಸ್ವಾಮಿ ರಾಜೀನಾಮೆ ಕೇಳಬಹುದಿತ್ತಲ್ಲವೇ? ಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಅಷ್ಟೇ ಎಂದರು.

ಜೂನ್​ 4ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ವಿಜಯೋತ್ಸವ ನಡೆಯುತ್ತಿದ್ದಾಗ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ತಮ್ಮ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಪ್ರಕರಣದಲ್ಲಿ ಸರ್ಕಾರದ್ದೇನು ತಪ್ಪಿಲ್ಲ. ಇದರಲ್ಲಿ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಪೊಲೀಸರ ಮೇಲೆ ಧಮ್ಕಿ ಎಂದಿದ್ದಾರೆ. ಇದ್ದಕ್ಕಿದ್ದ ಹಾಗೆ ಪೊಲೀಸರ ಮೇಲೆ ಹೆಚ್ ಡಿಕೆಗೆ ಪ್ರೀತಿ ಬಂದಿದೆ ಎಂದು ಅಸಮಾಧಾನ ಹೊರಹಾಕಿದರು.

ಬಿಜೆಪಿ – ಜೆಡಿಎಸ್ ನಾಯಕರು ಒತ್ತಾಯಿಸಿದಂತೆ ನ್ಯಾಯಾಂಗ ತನಿಖೆಯಾಗುತ್ತಿದೆ. ನಾವು ವಿಧಾನಸೌಧದ ಬಳಿ ನಡೆಸಿದ ಕಾರ್ಯಕ್ರಮದಲ್ಲಿ ಯಾವುದೇ ಅನಾಹುತ ನಡೆದಿಲ್ಲ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಸಹ ಭಾಗಿಯಾಗಿದ್ದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮಕ್ಕೆ ಕೆಎಸ್​ಸಿಎನವರು ನನಗೆ ಆಹ್ವಾನ ಮಾಡಿದ್ದರು. ಆದ್ರೆ ಅಲ್ಲಿನ ಭದ್ರತೆ ಬಗ್ಗೆ ಪೊಲೀಸರು ಮಾಹಿತಿ ನೀಡಿರಲಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ಕಾಲ್ತುಳಿತ ಸಂಭವಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಮಧ್ಯಾಹ್ನ 3:50ಕ್ಕೆ. ಆದರೆ, ಪೊಲೀಸರು ನನಗೆ ಮಾಹಿತಿ ನೀಡಿದ್ದು ಸಂಜೆ 5:45ಕ್ಕೆ. ಆದ್ದರಿಂದ ಯಾರು ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮವಹಿಸಿದ್ದೇವೆ. ಸರಿಯಾಗಿ ಮಾಹಿತಿ ನೀಡದೆ ಇದ್ದುದಕ್ಕೆ ಕ್ರಮ ಕೈಗೊಂಡಿದ್ದೇವೆ.


Spread the love

About Laxminews 24x7

Check Also

ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ 19.30 ಲಕ್ಷ ಮಂಗಮಾಯ..!

Spread the loveಮೈಸೂರು:ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ ಖದೀಮರು 19.30 ಲಕ್ಷ ಲಪಟಾಯಿಸಿ ವಂಚಿಸಿರುವ ಪ್ರಕರಣ ಸೆನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ