Breaking News

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ

Spread the love

ಬೆಂಗಳೂರು, ಜೂನ್​ 08: ಮಂಗಳೂರು (Mangaluru) ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಬಿಜೆಪಿ ನಾಯಕರು ಸೇರಿದಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆ NIAಗೆ ವಹಿಸುವಂತೆ ಮನವಿ ಮಾಡಿದ್ದ ಬಿಜೆಪಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾ‌ನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು. ಅಲ್ಲದೆ, ಪ್ರಕರಣದ ತನಿಖೆಯನ್ನು NIA ಗೆ ನೀಡುವಂತೆ ಸುಹಾಸ್ ಶೆಟ್ಡಿ ಪೋಷಕರು‌ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಸುಹಾಸ್ ಶೆಟ್ಟಿ ಕೊಲೆ

ಕಳೆದ ಗುರುವಾರ (ಮೇ.01) ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ

Spread the love ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ ಬೆಳಗಾವಿ : ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ