ಚಿಕ್ಕೋಡಿ(ಬೆಳಗಾವಿ): ತಡರಾತ್ರಿ ಅಥಣಿ ಹೊರವಲಯದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಣಜವಾಡ್ ಕಾಲೇಜು ಹತ್ತಿರ ವಿಜಯಪುರ-ಸಂಕೇಶ್ವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30) ಮತ್ತು ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚೌಹಾನ್ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ, ಪಿಕಪ್ ವಾಹನ, ಇನೋವಾ ಹಾಗೂ ಸ್ಕಾರ್ಪಿಯೋ ನಡುವೆ ಸರಣಿ ಅಪಘಾತವಾಗಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Laxmi News 24×7