Breaking News

ಬಸ್​​-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

Spread the love

ಹಾವೇರಿ: ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಮೃತರನ್ನು ದಾವಣಗೆರೆ ಮೂಲದ ಪ್ರವೀಣ (36) ಮತ್ತು ವಿಜಯ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ, ಕೊಟ್ರೇಶ ಅಬಲೂರ ಎಂಬವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟಿತ್ತು. ಈ ವೇಳೆ, ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಬಸ್​ಗೆ ಕಾರು ಡಿಕ್ಕಿಯಾಗಿ ದುರ್ಘಟನೆ ನಡೆದಿದೆ.ಮಾಹಿತಿ ತಿಳಿದ ತಕ್ಷಣ ಕುಮಾರಪಟ್ಟಣಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕುಮಾರಪಟ್ಟಣಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ