Breaking News

ಶ್ರೀಮಂತ ಯುವಕನಿಗೆ ಮದ್ಯ ಕುಡಿಸಿ ಗ್ಯಾಂಗ್​ನಿಂದ ದರೋಡೆ ಮಾಡಿಸಿದ ಸ್ನೇಹಿತರು:

Spread the love

ಬೆಂಗಳೂರು : ಯುವಕನಿಗೆ ಮದ್ಯಪಾನ ಮಾಡಿಸಿ ಆತನ ಸ್ನೇಹಿತರೇ ಮತ್ತೊಂದು ಗ್ಯಾಂಗ್​ನ ಮೂಲಕ ರಾಬರಿ ಮಾಡಿಸಿರುವ ಘಟನೆ ಚಿಕ್ಕಜಾಲ ವ್ಯಾಪ್ತಿಯಲ್ಲಿ ನಡೆದಿದೆ. ಚಂದನ್​​ ಎಂಬಾತನ ಚಿನ್ನದ ಸರ, ಕೈಕಡಗ ದರೋಡೆ ಮಾಡಲಾಗಿದ್ದು, ಕೊನೆಗೆ ಆತನೊಂದಿಗೆ ಸ್ನೇಹಿತರಾದ ಪವನ್ ಹಾಗೂ ಅಚಲ್ ಪೊಲೀಸ್​ ಠಾಣೆಗೆ ತೆರಳಿ ದೂರು ಕೊಡಿಸಿದ್ದರು. ಆದರೆ ಪೊಲೀಸರ ತನಿಖೆಯ ವೇಳೆ ಚಂದನ್‌ನ ಸ್ನೇಹಿತರ ಕಳ್ಳಾಟ ಬಯಲಾಗಿದೆ.

ಪ್ರಕರಣದ ಹಿನ್ನೆಲೆ: ಸ್ನೇಹಿತರಾಗಿದ್ದ ಚಂದನ್, ಪವನ್ ಮತ್ತು ಅಚಲ್ ಕಳೆದ ತಿಂಗಳು ಚಿಕ್ಕಜಾಲದ ಪಬ್​​ವೊಂದಕ್ಕೆ ತೆರಳಿದ್ದರು. ಈ ವೇಳೆ ಚಂದನ್​ಗೆ ಕಂಠಪೂರ್ತಿ‌ ಮದ್ಯಪಾನ ಮಾಡಿಸಿದ್ದ ಆರೋಪಿಗಳು, ನಂತರ ಆತನ ಕಾರಿನಲ್ಲಿ ಕರೆದೊಯ್ದಿದ್ದರು. ಮಾರ್ಗಮಧ್ಯೆ ಅಚಲ್, ಪ್ರೇಮ್ ಶೆಟ್ಟಿ ಹಾಗೂ ಆತನ ಗ್ಯಾಂಗ್​​ಗೆ ಫೋನ್ ಮಾಡಿ ಕರೆಸಿಕೊಂಡಿದ್ದ. ಸ್ಥಳಕ್ಕೆ ಬಂದಿದ್ದ ಪ್ರೇಮ್ ಶೆಟ್ಟಿ ತಂಡ ಮದ್ಯದ ಅಮಲಿನಲ್ಲಿದ್ದ​​ ಚಂದನ್​​ಗೆ ಥಳಿಸಿ ಆತನ ಮೈಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿತ್ತು. ಹಲ್ಲೆಗೊಳಗಾಗಿದ್ದ ಚಂದನ್ ಜೊತೆ ಸ್ನೇಹಿತರಾದ ಪವನ್ ಹಾಗೂ ಅಚಲ್ ತೆರಳಿ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದರು.

ತನಿಖೆ ವೇಳೆ ಅನುಮಾನಗೊಂಡ ಪೊಲೀಸರು ಅಚಲ್‌ನ ಫೋನ್ ಕರೆಯ ವಿವರಗಳನ್ನು ಗಮನಿಸಿದಾಗ ಆತ ಪ್ರೇಮ್ ಶೆಟ್ಟಿ ಎಂಬಾತನಿಗೆ ಕರೆ ಮಾಡಿರುವುದು ತಿಳಿದು ಬಂದಿದೆ. ಪೊಲೀಸರಿಗೆ ಅನುಮಾನ ಬರುತ್ತಿದ್ದಂತೆ ಪವನ್ ಮತ್ತು ಅಚಲ್ ಪರಾರಿಯಾಗಿದ್ದು, ಆರೋಪಿಗಳಿಗಾಗಿ ಶೋಧ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ