Breaking News

ಗುಮ್ಮಟನಗರಿ ಹುಡುಗ ನೀಟ್​​ನಲ್ಲಿ ಕರ್ನಾಟಕಕ್ಕೆ ಫಸ್ಟ್​ ರ‍್ಯಾಂಕ್

Spread the love

ವಿಜಯಪುರ, ಜೂನ್​ 15: ವಿಜಯಪುರ (Vijayapura) ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ. ಎಷ್ಟೇ ಹಿಂದುಳಿದಿದ್ದರೂ ಜಿಲ್ಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದಾರೆ. ಶನಿವಾರ ಪ್ರಕಟಗೊಂಡ ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷಾ ಫಲಿತಾಂಶದಲ್ಲಿ (NEET UG Result) ಜಿಲ್ಲೆಯ ವಿದ್ಯಾರ್ಥಿ ಕರ್ನಾಟಕಕ್ಕೆ ಮೊದಲನೇ ಸ್ಥಾನ ಗಳಿಸಿದ್ದಾರೆ. ನಗರದ ವೈದ್ಯ ದಂಪತಿಯ ಪುತ್ರ ನಿಖಿಲ್ ಸೊನ್ನದ ನೀಟ್​ ಪರೀಕ್ಷೆಯಲ್ಲಿ ಮಹತ್ವದ ಸಾಧನೆ ಮಾಡುವ ಮೂಲಕ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

720 ಕ್ಕೆ 670 ಅಂಕ

ವಿಜಯಪುರ ನಗರದ ವೈದ್ಯ ದಂಪತಿ ಡಾ. ಸಿದ್ದಪ್ಪ ಸೊನ್ನದ್ ಹಾಗೂ ಡಾ. ಮೀನಾಕ್ಷಿ ಅವರ ಮನೆಯಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಕಾರಣ ನಿನ್ನೆ ಪ್ರಕಟವಾದ ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷೆಯ ಫಲಿತಾಂಶ. ಈ ಪರೀಕ್ಷೆಯಲ್ಲಿ ಅವರ ಪುತ್ರ ನಿಖಿಲ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಪಡೆದು ಸಾಧನೆ ಮಾಡಿದ್ದಾರೆ. ರಾಷ್ಟ್ರಮಟ್ಟದಲ್ಲಿ 17 ನೇ ರ‍್ಯಾಂಕ್‌ ಪಡೆಯುವ ಮೂಲಕ ರಾಜ್ಯ ಹಾಗೂ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಗನ ಸಾಧನೆಗೆ ಇಡೀ ಕುಟುಂಬ ಸಂಸತಪಟ್ಟಿದೆ. ಮಂಗಳೂರು ವಳಚಿಲ್‌ನ ಎಕ್ಸ್‌ಫರ್ಟ್‌ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನಿಖಿಲ್​​, ನೀಟ್​ ಪರೀಕ್ಷೆಯಲ್ಲಿ 720 ಅಂಕಗಳಿಗೆ 670 ಅಂಕ ಪಡೆದಿದ್ದಾರೆ.

ನರರೋಗ ತಜ್ಞನಾಗುವ ಆಸೆ: ನಿಖಿಲ್ ಸೊನ್ನದ

ನಿಖಿಲ್ ಸಾಧನೆ ಕುಟುಂಬಕಷ್ಟೇಯಲ್ಲಾ ಜಿಲ್ಲೆ ಹಾಗೂ ರಾಜ್ಯಕ್ಕೆ ಸಂತಸದ ಸಂಗತಿ. ನಿಖಿಲ್​​ಗೆ ಆರತಿ ಬೆಳಗಿ ಸಿಹಿ ತಿನ್ನಿಸಿ ಪೋಷಕರು ಸಂತಸ ಪಟ್ಟಿದ್ದಾರೆ. ಇದೇ ವೇಳೆ ಮಾತನಾಡಿದ ವಿದ್ಯಾರ್ಥಿ ನಿಖಿಲ್​, ಒತ್ತಡ ರಹಿತವಾಗಿ ನಿರಂತರ ಅಭ್ಯಾಸ, ಕ್ರೀಡೆ, ಸಾಹಿತ್ಯ, ಆಧ್ಯಾತ್ಮಗಳ ವಿಚಾರ ಪಠ್ಯೇತರವಾಗಿ ಅಳವಡಿಕೆ ಮಾಡಿಕೊಂಡು ಸತತ ಪರಿಶ್ರಮದಿಂದ ಅಭ್ಯಾಸ ಮಾಡಿದೆ. ಮುಂದೆ ದೆಹಲಿಯ ಏಮ್ಸ್​ನಲ್ಲಿ ಎಂಬಿಬಿಎಸ್ ಮಾಡಿ, ನಂತರ ನರರೋಗ ತಜ್ಞನಾಗುವ ಆಸೆ ಇದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಸವಣ್ಣನವರ ವಚನಗಳನ್ನು ವಿಶ್ವಕ್ಕೆ ತಲುಪಿಸಿದ ಡಿವೈಎಸ್ಪಿ ಬಸವರಾಜ ಯಲಿಗಾರ

Spread the love ಬಸವಣ್ಣನವರ ವಚನಗಳನ್ನು ವಿಶ್ವಕ್ಕೆ ತಲುಪಿಸಿದ ಡಿವೈಎಸ್ಪಿ ಬಸವರಾಜ ಯಲಿಗಾರ ಗುಮ್ಮಟನಗರಿ ವಿಜಯಪುರ ಜಿಲ್ಲೆಯ ಭೀಮಾತೀರದ ಕುಖ್ಯಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ