Breaking News

ಶೃಂಗೇರಿ ಟು ಮಂಗಳೂರು ರಸ್ತೆ ಸಂಚಾರ ಬಂದ್

Spread the love

ಚಿಕ್ಕಮಗಳೂರು, ಜೂನ್​ 15: ಮಲೆನಾಡು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರಿ ಮಳೆ (Rain) ಮುಂದುವರೆದಿದೆ. ಹಲವೆಡೆ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರ ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದೆ. ಶೃಂಗೇರಿ-ಮಂಗಳೂರು ಮಾರ್ಗದ (Sringeri to Mangaluru) ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಮಂಗಳೂರಿಗೆ ತೆರಳುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಪೊಲೀಸರು ಸೂಚನೆ ನೀಡಿದ್ದಾರೆ.

ಶೃಂಗೇರಿ ಟು ಮಂಗಳೂರು ರಸ್ತೆ ಸಂಚಾರ ಬಂದ್

ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ನೆಮ್ಮಾರು ಗ್ರಾಮದ ಬಳಿ ಗುಡ್ಡ ಕುಸಿಯುತ್ತಿರುವುದರಿಂದ ಗುಡ್ಡ ಶೃಂಗೇರಿ ಟು ಮಂಗಳೂರು ರಸ್ತೆ ಸಂಚಾರ ಬಂದ್​ ಆಗಿದೆ. ಜೆಸಿಬಿ ಮೂಲಕ ರಸ್ತೆಗೆ ಅಡ್ಡಲಾಗಿ ಬಿದ್ದ ಮಣ್ಣು ತೆರವು ಕಾರ್ಯಚರಣೆ ನಡೆದಿದ್ದು, ಮಳೆ ಅಡ್ಡಿ ಆಗಿದೆ. ಸದ್ಯ ಶೃಂಗೇರಿ ಠಾಣೆಯ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಬದಲಿ ಮಾರ್ಗಗಳು

ಇನ್ನು ಶಿವಮೊಗ್ಗ, ಶೃಂಗೇರಿ, ನೆಮ್ಮಾರು ಮತ್ತು ಎಸ್​ಕೆ ಬಾರ್ಡರ್ ಮೂಲಕ ಮಂಗಳೂರಿಗೆ ಸಂಪರ್ಕಿಸುವ ರಸ್ತೆ ಸಂಚಾರ ಬಂದ್ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಬಿದರಗೋಡು, ಆಗುಂಬೆ ಮತ್ತು ಉಡುಪಿ ಮಾರ್ಗವಾಗಿ ಮಂಗಳೂರಿಗೆ ಸಂಚರಿಸಲು ವಾಹನ ಸವಾರರಿಗೆ ಪೊಲೀಸರು ಸೂಚಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ