Breaking News

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ….ಧಾರವಾಡದಲ್ಲಿ ಬೀದಿಗೆ ಇಳುದು ಬಿಜೆಪಿ ಆಕ್ರೋಶ.

Spread the love

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ….ಧಾರವಾಡದಲ್ಲಿ ಬೀದಿಗೆ ಇಳುದು ಬಿಜೆಪಿ ಆಕ್ರೋಶ.
ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹೊತ್ತು, ಕೂಡಲೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಧಾರವಾಡದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ವೈ- ಧಾರವಾಡದ ಜ್ಯುಬಿಲಿ ವೃತ್ತವನ್ನು ಬಂದ್ ಮಾಡಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು ಆಕ್ರೋಶ ವ್ಯಕ್ತಪಡಿಸಿದರು. ಆರ್‌ಸಿಬಿ ಕಪ್ ಗೆದ್ದ ಕ್ರೆಡಿಟ್ ತಾನು ಪಡೆದುಕೊಳ್ಳುವ ಭರದಲ್ಲಿ ರಾಜ್ಯ ಸರ್ಕಾರ 11 ಜನ ಅಮಾಯಕರ ಜೀವ ಬಲಿ ಪಡೆದಿದೆ. ತನ್ನ ತಪ್ಪನ್ನು ಮುಚ್ಚಿ ಹಾಕಲು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡುವ ಮೂಲಕ ಸರ್ಕಾರ ತನ್ನ ದುರಾಡಳಿತ ಪ್ರದರ್ಶಿಸಿದೆ.
ಕೂಡಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಹಾಗೂ ಮೃತರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಿ ಅವರ ಕಣ್ಣೊರೆಸುವ ಕೆಲಸ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.

Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ