Breaking News

ಖಾನಾಪುರ ಪೊಲೀಸ್ ತರಬೇತಿ ಶಾಲೆಯ 22 ಪ್ರಶಿಕ್ಷಣಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲ

Spread the love

ಬೆಳಗಾವಿ: ಖಾನಾಪುರ ಪೊಲೀಸ್ ತರಬೇತಿ ಶಾಲೆಯ 22 ಪ್ರಶಿಕ್ಷಣಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ವಿಷಪೂರಿತ ಆಹಾರ ಸೇವಿಸಿರುವ ಶಂಕೆ ವ್ಯಕ್ತವಾಗಿದೆ.ಪ್ರಶಿಕ್ಷಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಎಸ್ಪಿ

ಖಾನಾಪುರದಲ್ಲಿರುವ ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆಯಲ್ಲಿ‌ 9 ತಿಂಗಳ ಬುನಾದಿ ತರಬೇತಿ ಪಡೆಯಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪ್ರಶಿಕ್ಷಣಾರ್ಥಿಗಳ ಪೈಕಿ 22 ಪ್ರಶಿಕ್ಷಣಾರ್ಥಿಗಳು ವಿಷಪೂರಿತ ಆಹಾರ ಸೇವಿಸಿದ್ದರಿಂದ ಅಸ್ವಸ್ಥಗೊಂಡಿದ್ದರು. ವಾಂತಿ ಬೇಧಿ, ಜ್ವರ ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಬೆಳಗ್ಗೆ ಖಾನಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.22 ಪ್ರಶಿಕ್ಷಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಎಸ್ಪಿ

ಭಾನುವಾರ ಸಂಜೆ ತರಬೇತಿ ಶಾಲೆಯ ಅಡುಗೆ ಮನೆಗೆ ರಜೆ ನೀಡಲಾಗಿತ್ತು. ಪ್ರಶಿಕ್ಷಣಾರ್ಥಿಗಳು ಖಾನಾಪುರದ ಬೇರೆ ಬೇರೆ ಹೋಟೆಲ್ ಗಳಿಗೆ ತೆರಳಿ ರಾತ್ರಿ ಊಟ ಮಾಡಿ ತರಬೇತಿ ಶಾಲೆಗೆ ಮರಳಿದ್ದರು. ಬಳಿಕ ರಾತ್ರಿಯಿಡೀ ಆರೋಗ್ಯ ಸಮಸ್ಯೆ ಅನುಭವಿಸಿದ್ದರಿಂದ ಸೋಮವಾರ ಬೆಳಗ್ಗೆ ಅಸ್ವಸ್ಥಗೊಂಡ 22 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಖಾನಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ಪ್ರಶಿಕ್ಷಾರ್ಥಿಗಳು ಭಾನುವಾರ ರಾತ್ರಿ ಸೇವಿಸಿದ ಆಹಾರದ ಬಗ್ಗೆ ತನಿಖೆ ನಡೆದಿದ್ದು, ವಿಷಪೂರಿತ ಆಹಾರ ನೀಡಿದವರನ್ನು ಪತ್ತೆ ಹಚ್ಚಿ, ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ