Breaking News

ಟವೆಲ್ ವಿಚಾರಕ್ಕೆ ಕಾರ್ಮಿಕರ ನಡುವೆ ಜಗಳ

Spread the love

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗೆ ಕೂಲಿಯಾಳುಗಳಾಗಿ ಬಂದಿದ್ದವರು, ಟವೆಲ್ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇದೇ ಜಗಳ ಓರ್ವ ಕೂಲಿ ಕಾರ್ಮಿಕನ ಕೊಲೆಗೆ ಕಾರಣವಾಗಿದೆ.

ದೊಡ್ಡಬಳ್ಳಾಪುರ ತಾಲೂಕು ಹೆಗ್ಗಡಿಹಳ್ಳಿಯಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ವಿಜಯಕುಮಾರ್ (34) ಕೊಲೆ ಮಾಡಲಾಗಿದೆ ಎಂದು ಮೃತನ ಹೆಂಡತಿ ಗೌರಮ್ಮ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಪೂಜಪ್ಪನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಕೊಲೆಯಾದ ವಿಜಯಕುಮಾರ್ ಕೋಲಾರ ಜಿಲ್ಲೆ ಮಾಲೂರು ಟೌನ್ ನಿವಾಸಿ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಆತ, ಕಾಂಟ್ರ್ಯಾಕ್ಟರ್ ಚೇತನ್ ಅವರ ಬಳಿ ಕೆಲಸಕ್ಕಿದ್ದ. ಜೂನ್ 10ರಂದು ದೊಡ್ಡಬಳ್ಳಾಪುರ ತಾಲೂಕಿನ ಹೆಗ್ಗಡಿಹಳ್ಳಿಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿ ಕೆಲಸಕ್ಕೆ ಹೋಗಿದ್ದ.ಹೆಗ್ಗಡಿಹಳ್ಳಿ ಗ್ರಾಮದಲ್ಲಿ ಕೂಲಿ ಕಾರ್ಮಿಕರು ವಾಸವಾಗಿದ್ದರು. ಜೂನ್ 13ರ ರಾತ್ರಿ ಟವೆಲ್ ವಿಚಾರಕ್ಕೆ ಸಂಬಂಧಿಸಿದಂತೆ ಪೂಜಪ್ಪ ಮತ್ತು ವಿಜಯ್ ಕುಮಾರ್ ನಡುವೆ ಜಗಳವಾಗಿತ್ತು. ಈ ವೇಳೆ ವಿಜಯ ಕುಮಾರ್ ಪೂಜಪ್ಪನ ಹೆಂಡತಿ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದು, ಇದೇ ಕೋಪದಲ್ಲಿ ಆತ ಮರದ ರಿಪೀಸ್ ಪಟ್ಟಿಯಿಂದ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವಕ್ಕೊಳಗಾದ ವಿಜಯ್ ಕುಮಾರ್​ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಲಾಗಿತ್ತು. ಆದ್ರೆ ರಕ್ತಸ್ರಾವದಿಂದ ಆತ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆಂದು ಮೃತನ ಪತ್ನಿ ಗೌರಮ್ಮ ನೀಡಿದ ದೂರು ಆಧರಿಸಿ ಕೊಲೆ ಪ್ರಕರಣ ದಾಖಲು ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ