Breaking News

ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ.

Spread the love

ಬೆಳಗಾವಿ: ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ.
68 ವರ್ಷ ವಯಸ್ಸಿನ ಕಾಕಾಸಾಹೇಬ್ ಪಾಟೀಲ್‌ ಅವರು ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿನಿಧಿಸುತ್ತ ಬಂದಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು.
1975ರಲ್ಲಿ ದೇವ ಚಂದ್ ಕಾಲೇಜಿನಲ್ಲಿ ಬಿಎ ಪದವಿ ಪೂರೈಸಿದ ಅವರು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿ ಹಲವು ಬಾರಿ ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗುತ್ತಾ ಬಂದಿದ್ದರು. ಮರಾಠಾ ಸಮುದಾಯಕ್ಕೆ ಸೇರಿರುವ ಅವರು ತಮ್ಮ ಸಮುದಾಯದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಹರಿದು ಬರುವಂತೆ ಶ್ರಮಿಸಿದ್ದರು. ಮರಾಠಿ ಪ್ರಭಾವದ ನಿಪ್ಪಾಣಿಯನ್ನು ಪ್ರತಿನಿಧಿಸುತ್ತಿದ್ದರೂ ಕನ್ನಡವನ್ನು ಸಹಾ ಮಾತನಾಡುತ್ತಿದ್ದರು.
1999, 2004, 2008ರಲ್ಲಿ ಮೂರು ಬಾರಿ ಅವರು ನಿಪ್ಪಾಣಿ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು ಆದರೆ ನಂತರದ ಚುನಾವಣೆಗಳಲ್ಲಿ ಅವರು ಪರಾಭವ ಅನುಭವಿಸಿದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ