Breaking News

2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ

Spread the love

2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ

ಬೆಂಗಳೂರು: 2025-26ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ಸರ್ಕಾರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದೆ.

ಈ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರ ವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಈ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯಕವೆಂದು ಪರಿಗಣಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಮೇ 12ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2025-26ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.EMPLOYEES TRANSFER GUIDELINES


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ