Breaking News

ಇನ್ನೂ 2 ದಿನ ಭಾರಿ ಮಳೆ ಮುನ್ಸೂಚನೆ

Spread the love

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಅಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಹಾಗೂ ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್​​ನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಿದ್ದಾಪುರ, ಭಾಗಮಂಡಲ, ಗೇರುಸೊಪ್ಪ, ಆಗುಂಬೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸುಳ್ಯ, ಕಾರ್ಕಳ, ಕೋಟಾ, ಧರ್ಮಸ್ಥಳ, ಬೆಳ್ತಂಗಡಿ, ಸಿದ್ದಾಪುರ, ಉಪ್ಪಿನಂಗಡಿ, ಕುಂದಾಪುರ, ಹೊನ್ನಾವರ, ಕ್ಯಾಸಲ್​​ರಾಕ್, ಉಡುಪಿ, ಮಾಣಿ, ಮಂಕಿ, ಕಮ್ಮರಡಿ, ನಾಪೋಕ್ಲು, ಶೃಂಗೇರಿ, ಪೊನ್ನಂಪೇಟೆ, ಕೊಟ್ಟಿಗೆಹಾರ, ವಿರಾಜಪೇಟೆ, ಪುತ್ತೂರು, ಮಂಗಳೂರು, ಕುಮಟಾ, ಸೋಮವಾರಪೇಟೆ, ಪಣಂಬೂರು, ಕಾರವಾರ, ಕಳಸ, ಕೊಪ್ಪ, ಹುಂಚದಕಟ್ಟೆ, ಬನವಾಸಿ, ಲೋಂಡಾ, ಖಾನಾಪುರ, ಮುಲ್ಕಿ, ಶಿರಾಲಿ, ಬಾಳೆಹೊನ್ನೂರು, ಮುಂಡಗೋಡು, ಕಿರವತ್ತಿ, ಹಾರಂಗಿಯಲ್ಲಿ ಸಾಧಾರಣ ಮಳೆ ಸುರಿದಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ನಿನ್ನೆ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ರಾಜಧಾನಿಯಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್​​ಎಎಲ್​​ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ