ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಸೋಗಿನಲ್ಲಿ ಚಿನ್ನದ ವ್ಯಾಪಾರಿಗೆ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಕುರಿತು ಐಶ್ವರ್ಯ ಗೌಡ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಗಳ ಸಮಗ್ರ ತನಿಖೆ ನಡೆಸುವಂತೆ ಸಿಐಡಿಗೆ ಪೊಲೀಸ್ ಇಲಾಖೆಯು ಆದೇಶಿಸಿದೆ.
ಚಂದ್ರಾಲೇಔಟ್, ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು ಹಾಗೂ ಮಂಡ್ಯದಲ್ಲಿ ದಾಖಲಾಗಿದ್ದ ಎರಡು ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ತನಿಖೆ ನಡೆಸುವಂತೆ ಇಲಾಖೆಯು ಸಿಐಡಿಗೆ ಆದೇಶಿಸಿದೆ.
ಡಿ.ಕೆ. ಸುರೇಶ್ ಸಹೋದರಿ. ನನಗೆ ರಾಜಕೀಯ ನಾಯಕರ ಪರಿಚಯವಿದೆ ಎಂದು ಹೇಳಿ ಸಾಲದ ರೂಪದಲ್ಲಿ 9.82 ಕೋಟಿ ರೂ. ಮೌಲ್ಯದ ಚಿನ್ನ ಪಡೆದು ವಂಚಿಸಿದ ಆರೋಪದಡಿ ಕಳೆದ ವರ್ಷ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲೀಕರಾದ ವನಿತಾ ಎಸ್ ಐತಾಳ್ ಎಂಬುವರು ನೀಡಿದ್ದ ದೂರಿನನ್ವಯ ಐಶ್ವರ್ಯ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಚಿತ್ರನಟ ಧರ್ಮೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಆರ್.ಆರ್. ನಗರ ಸೇರಿದಂತೆ ಮಂಡ್ಯ ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ಗೌಡ ವಿರುದ್ಧ ಸಾಲು-ಸಾಲು ಪ್ರಕರಣ ದಾಖಲಾಗಿದ್ದವು.
Laxmi News 24×7