Breaking News

ಲೋಕಾಯುಕ್ತ ಹೆಸರಲ್ಲಿ ಹಣ ವಸೂಲಿ: ಹೆಡ್​ ಕಾನ್​ಸ್ಟೇಬಲ್​ ನಿಂಗಪ್ಪ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್​ ತಡೆ

Spread the love

ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಲೋಕಾಯುಕ್ತದ ಮಾಜಿ ಹೆಡ್‌ ಕಾನ್‌ಸ್ಟೆಬಲ್‌ ನಿಂಗಪ್ಪ ಸಾವಂತ್‌ ವಿರುದ್ಧದ ಪೊಲೀಸ್‌ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣ ತಮ್ಮ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಹೊಳಲ್ಕೆರೆ ತಾಲೂಕು ತಾಳಿಕಟ್ಟೆಯ ನಿಂಗಪ್ಪ ಸಾವಂತ್‌ (45) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌. ಆರ್‌. ಕೃಷ್ಣಕುಮಾರ್ ಅವರ ಈ ಆದೇಶ ಮಾಡಿತು. ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಲೋಕಾಯುಕ್ತ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಜು.15ಕ್ಕೆ ಮುಂದೂಡಿತು.

ಮತ್ತೊಂದು ಅರ್ಜಿ : ನಿಂಗಪ್ಪ ಬಂಧನವನ್ನು ಪ್ರಶ್ನಿಸಿ ಆತನ ಪತ್ನಿ ಚಂದ್ರಕಲಾ ಹೈಕೋರ್ಟ್‌ಗೆ ಪ್ರತ್ಯೇಕವಾಗಿ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತ ಪೊಲೀಸರು ತಮ್ಮ ಪತಿಯನ್ನು 2025ರ ಮೇ 31ರಂದು ಹೊಸದುರ್ಗದಲ್ಲಿ ಬಂಧಿಸಿದ್ದಾರೆ. ಅದರೆ, 2025ರ ಜೂ.2ರಂದು ಬೆಂಗಳೂರಿನ ರಾಜಾಜಿನಗರದ ಮಾರುತಿ ಮೈದಾನದಲ್ಲಿ ಬಂಧಿಸಲಾಗಿದೆ ಎಂಬುದಾಗಿ ದಾಖಲೆಗಳಲ್ಲಿ ತೋರಿಸಲಾಗಿದೆ. ಪೊಲೀಸರು ಬಂಧನಕ್ಕೂ ಮುನ್ನ ಆರೋಪಿಗೆ ನೀಡಬೇಕಾದ ಸೂಕ್ತ ಕಾರಣ/ಆಧಾರಗಳನ್ನು ಒದಗಿಸಿಲ್ಲ. ಹಾಗಾಗಿ, ಈ ಬಂಧನ ಅಕ್ರಮವೆಂದು ಘೋಷಿಸಬೇಕು. ಪತಿಯನ್ನು ಕೂಡಲೇ ಬಿಡುಗಡೆಗೊಳಿಸಲು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಚಂದ್ರಕಲಾ ಕೋರಿದ್ದಾರೆ. ಈ ಅರ್ಜಿ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ