Breaking News

ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿದ ತಾಯಿ! –

Spread the love

ಬಳ್ಳಾರಿ: ಕೌಟುಂಬಿಕ ಕಲಹದಿಂದ ಬೇಸತ್ತ ಕುರಿಗಾಹಿ ಕುಟುಂಬದ ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ.

ಸಿದ್ದವ್ವ (29) ತನ್ನ ಏಳು, ಐದು ಮತ್ತು ಮೂರು ವರ್ಷದ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ರಾಮದ ಜಮೀನೊಂದರ ಕೃಷಿ ಹೊಂಡದಲ್ಲಿ ಇವರೆಲ್ಲರ ಮೃತದೇಹ ಬುಧವಾರ ಪತ್ತೆಯಾಗಿವೆ. ಮತ್ತೊಂದು ಕುರಿ ಗುಂಪಿನಲ್ಲಿದ್ದ ಲಕ್ಷ್ಮೀಯ ಮಗ ಅಭಿಷೇಕ್ (9) ಬದುಕುಳಿದಿದ್ದಾನೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಹೊಸೂರ್-ಚಂಪಾ ಗ್ರಾಮದ ಈ ಕುರಿಗಾಹಿ ಕುಟುಂಬ, ಕುರಿಗಳೊಂದಿಗೆ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ಹಲವು ದಿನಗಳಿಂದ ಬೀಡುಬಿಟ್ಟಿತ್ತು.

ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ತಾಯಿ ಮತ್ತು ಮೂವರು ಮಕ್ಕಳು ಕುರಿಗಳನ್ನು ಬಿಟ್ಟು ಕಾಣೆಯಾಗಿದ್ದರು. ಬುಧವಾರ ಬೆಳಗ್ಗೆ ಕೃಷಿ ಹೊಂಡದ ಬಳಿ ಹೋಗಿ ನೋಡಿದಾಗ ಎಲ್ಲರ ಮೃತದೇಹಗಳು ಪತ್ತೆಯಾಗಿವೆ. ಹೊಸೂರ್ ಗ್ರಾಮದ ಸಿದ್ದವ್ವಳನ್ನು ಅದೇ ಗ್ರಾಮದ ಸಂಜಯ್ ಎಂಬುವವರಿಗೆ ಕೊಟ್ಟು 10 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ