Breaking News

ಒಂದೇ ಮಳೆಗೆ 527 ಕೋಟಿ ರೂ. ವೆಚ್ಚದ ಹೈವೇ-13 ಬಣ್ಣ ಬಯಲು…!

Spread the love

ಶಿವಮೊಗ್ಗ, ಜೂನ್​ 18: ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ (Shivamogga-Chitradurga National Highway) ಕಾಮಗಾರಿ ಮುಗಿದು ಉದ್ಘಾಟನೆ ಕಾರ್ಯಕ್ರಮ ಕೂಡ ಆಗಿತ್ತು. ಉದ್ಘಾಟನೆಯಾಗಿ ಕೇವಲ ಒಂದೇ ತಿಂಗಳಲ್ಲಿ ಹೆದ್ದಾರಿ ಕಾಮಗಾರಿಯ ಬಣ್ಣ ಬಯಲಾಗಿದೆ. 527 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಹೆದ್ದಾರಿ ಬಿರುಕು ಬಿಟ್ಟಿದೆ. ಶಿವಮೊಗ್ಗದಿಂದ-ಚಿತ್ರದುರ್ಗಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 13 ಬಿರುಕುಬಿಟ್ಟಿದೆ. ಉದ್ಘಾಟನೆಗೊಂಡು ಒಂದೇ ತಿಂಗಳಿಗೆ ರಸ್ತೆ ಕುಸಿದಿರುವುದು ಕಾಮಗಾರಿಯ ಅಸಲಿ ಬಣ್ಣ ಬಯಲಾಗಿದೆ. ಒಂದೇ ಮಳೆಗೆ ರಸ್ತೆಯ ಕಳಪೆ ಕಾಮಗಾರಿ ಬಟಾ ಬಯಲಾಗಿದೆ.

527 ಕೋಟಿ ವೆಚ್ಚದಲ್ಲಿ 106 ಕಿ.ಮೀ ರಾಷ್ಟ್ರೀಯ ಹೆದ್ದಾರಿ 13 ನಿರ್ಮಾಣ ಮಾಡಲಾಗಿದೆ. ಈ ಹೆದ್ದಾರಿ ಸಲುವಾಗಿ ಸುಮಾರು 80 ಕೋಟಿ ವೆಚ್ಚದಲ್ಲಿ ಹೊಳೆಹೊನ್ನೂರಿನ ಬಳಿ ಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲಾಗಿದೆ. ಕಳೆದ ತಿಂಗಳು ಸಂಸದ ಬಿ.ವೈ ರಾಘವೇಂದ್ರ ಅವರು ರಾಷ್ಟ್ರೀಯ ಹೆದ್ದಾರಿ 13 ಅನ್ನು ಲೋಕಾರ್ಪಣೆಗೊಳಿಸಿದ್ದರು. ಇದೀಗ ಹೆದ್ದಾರಿ ಬಿರುಕುಬಿಟ್ಟಿದ್ದು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದ ಕಂಪನಿ ಮತ್ತು ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಮಲೆನಾಡಿನ ಭಾಗದ ಜನರು ಈ ಹೆದ್ದಾರಿ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡುತ್ತಾರೆ. ಉತ್ತಮ ಹೆದ್ದಾರಿ ಓಡಾಟಕ್ಕೆ ಸಿಕ್ಕಿತು ಎಂದು ಖುಷಿ ಪಟ್ಟಿದ್ದರು. ಆದರೆ, ಹೆದ್ದಾರಿ ಬಿರುಕು ಬಿಟ್ಟಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದ ಕಂಪನಿಯ ಮತ್ತು ಎಂಜಿನಿಯರ್​ ವಿರುದ್ಧ ಗಮನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ