Breaking News

ಕುರಿ ಮೇಯಿಸಿದ್ದಕ್ಕೆ ದಂಡ ಹಾಕಿ ಅರಣ್ಯ ಇಲಾಖೆಯಿಂದ ಕಿರುಕುಳ

Spread the love

ಕುರಿ ಮೇಯಿಸಿದ್ದಕ್ಕೆ ದಂಡ ಹಾಕಿ ಅರಣ್ಯ ಇಲಾಖೆಯಿಂದ ಕಿರುಕುಳ
ಕುರಿಗಳೊಂದಿಗೆ ಬೀಳಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಮುತ್ತಿಗೆಗೆ ಯತ್ನಿಸಿದ ಕುರಿಗಾಹಿಗಳು…
ಗುಡ್ಡದಲ್ಲಿ ಕುರಿ ಮೇಯಿಸಲು ಹೋದ ಕುರಿಗಾಹಿಗಳನ್ನು ಹೊಡೆದು ತೊಂದರೆ ನೀಡುತ್ತಿರುವ ಅರಣ್ಯ ಇಲಾಖೆಯ ನೀತಿಯನ್ನು ಖಂಡಿಸಿ ಇಂದು ಕುರಿಗಾಹಿಗಳು ಕುರಿಗಳ ಸಮೇತ ಬೀಳಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಕುರಿಗಾಹಿಗಳಿಗೆ ಅರಣ್ಯ ಇಲಾಖೆಯಿಂದ ಕುರಿಗಾಹಿಗಳಿಗೆ ಕುರಿ ಮೇಯಿಸಲು ತೊಂದರೆ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಇಂದು ಕುರಿಗಾಹಿಗಳು ಕುರಿಗಳೊಂದಿಗೆ ಬೀಳಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೇ ಪೊಲೀಸರು ಕುರಿಗಳನ್ನು ಮುಖ್ಯಧ್ವಾರದಲ್ಲೇ ತಡೆದರು. ಈ ವೇಳೆ ಪೊಲೀಸರು ಮತ್ತು ಕುರಿಗಾಹಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಕುರಿಗಾಹಿಗಳಿಗೆ ದಂಡ ವಿಧಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಕಿರುಕುಳ ನೀಡಲಾಗುತ್ತಿದೆ. ಹಿಂದಿನಿಂದಲೂ ತಮ್ಮ ತಮ್ಮ ಗ್ರಾಮಗಳ ಗುಡ್ಡದಲ್ಲಿ ಕುರಿ ಮೇಯಿಸುವುದು ವಾಡಿಕೆಯಿದೆ. ಆದರೆ ಇತ್ತೀಚೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕುರಿ ಮೇಯಿಸಲು ನಿರ್ಬಂಧ ಹೇರಲಾಗುತ್ತಿದೆ. ಕುರಿ ಮೇಯಿಸಲು ಮುಕ್ತ ಅವಕಾಶ ನೀಡಬೇಕು ಎಂದು ಈ ವೇಳೆ ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕುರಿಗಾಹಿಗಳು ಭಾಗಿಯಾಗಿದ್ಧರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ