Breaking News

ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್

Spread the love

ಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬುಧವಾರ ಬೆಳಗ್ಗೆ ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಕನ್ನಮಂಗಲ ಗೇಟ್​ನಿಂದ ವೈಟ್ ಫೀಲ್ಡ್ ಕಡೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಜೈನ್ ಹೆರಿಟೇಜ್ ಶಾಲೆಯ ಬಸ್ ಇದಾಗಿದೆ. ಮಕ್ಕಳನ್ನ ಶಾಲೆಗೆ ಬಿಟ್ಟು ಇಂಧನ ತುಂಬಿಸಿಕೊಳ್ಳಲು ಬಸ್ ಚಾಲಕ ಪೆಟ್ರೋಲ್ ಬಂಕ್​ಗೆ ಹೋಗುವಾಗ ಬ್ರೇಕ್ ಫೆಲ್ಯೂರ್ ಆಗಿದ್ದರಿಂದಾಗಿ ವೇಗವಾಗಿ ಬೈಕ್ ಹಾಗೂ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.ದುರ್ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡರೆ, ಡಿಕ್ಕಿಯಾಗಿದ್ದ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ದೃಶ್ಯ ಕಾರೊಂದರ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಂಧನ ಭೀತಿಯಿಂದ ಪಾರಾಗಲು ನಿರೀಕ್ಷಣಾ ಜಾಮೀನಿಗೆ ಮೊರೆ ಹೋದ ಲೋಕಾಯುಕ್ತ ಐಪಿಎಸ್

Spread the loveಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರಬೇಕಿದ್ದ ಲೋಕಾಯುಕ್ತ ಅಧಿಕಾರಿಗಳೇ ಭ್ರಷ್ಟರಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ