Breaking News

ಮೃಗಾಲಯದ ಹೆಣ್ಣು ಹುಲಿ ದೇವಿ ಸಾವು

Spread the love

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿರುವ ಶ್ರೀ ಅಟಲ್​​​ ಬಿಹಾರಿ ವಾಜಪೇಯಿ ಜೂಲಾಜಿಕಲ್​​ ಪಾರ್ಕ್‌ನಲ್ಲಿ​ ‘ದೇವಿ’ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದಾಗಿ ಮೃತಪಟ್ಟಿದೆ ಎಂದು ಉಪ ಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.

ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದ ಹುಲಿಯನ್ನು ಹೆಚ್ಚಿನ ಚಿಕಿತ್ಸೆಗೆ ವಾಜಪೇಯಿ ಜೂಲಾಜಿಕಲ್ ಪಾರ್ಕ್‌ಗೆ ಸ್ಥಳಾಂತರಿಸಲಾಗಿತ್ತು. ಇಲ್ಲಿನ ರಕ್ಷಣಾ ಕೇಂದ್ರದಲ್ಲಿ ಕಳೆದ ಎರಡು ವರ್ಷಗಳಿಂದ ವೈದ್ಯೋಪಚಾರ ನೀಡಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿತ್ತು. ಹುಲಿಗೆ ಅಂದಾಜು 18ರಿಂದ 19 ವರ್ಷ ವಯಸ್ಸಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ