Breaking News

ಟ್ವಿಟ್ಟರ್ ನಲ್ಲಿ ಸಿದ್ದು ವಿರುದ್ಧ ಕುಮ್ಮಿ ಕಿಡಿ….

Spread the love

ಬೆಂಗಳೂರು,ಡಿ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಒಳ ಒಪ್ಪಂದಗಳ ಜನಕ ಎಂದು ಆರೋಪಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪ್ರಾದೇಶಿಕ ಪಕ್ಷ ಕಟ್ಟಿ ನಿಮ್ಮ ಸಾಮಥ್ರ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಸವಾಲು ಹಾಕಿದ್ದಾರೆ.  ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜಕೀಯ ಒಳ ಒಪ್ಪಂದದ ಬಗ್ಗೆ ಮಾತನಾಡಬೇಡಿ.

ತಾವು ರಾಜಕೀಯ ಒಳ ಒಪ್ಪಂದಗಳ ಜನಕ ಎಂಬುದು ಯಾವಾಗಲೋ ಸಾಬೀತಾಗಿದೆ. ಇನ್ನೆಂದೂ ಕೂಡ ಜೆಡಿಎಸ್‍ನ ಸ್ಥಾನ ಗಳಿಕೆ ಬಗ್ಗೆ ಲಘುವಾಗಿ ಮಾತನಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮ್ಮಗದು ಸಾಧ್ಯವೂ ಇಲ್ಲ ಎಂದು ಟೀಕಾ ಪ್ರಹಾರ ಮಾಡಿದ್ದಾರೆ.

ಜೆಡಿಎಸ್ ಸ್ಥಾನ ಗಳಿಕೆ , ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯರಿಗೆ ಒಂದು ಸವಾಲು. ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮಥ್ರ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ. ನಂತರ ಜೆಡಿಎಸ್ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ