ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೇ, ಸೂಸೈಡ್ ಮತ್ತು ಸುಪಾರಿ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಬರೆದಿರುವ ಪೋಸ್ಟರ್ಗಳನ್ನು ಸಾರ್ವಜನಿಕ ಶೌಚಾಲಯದ ಗೋಡೆಗೆ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಮತ್ತಿತರರ ವಿರುದ್ಧದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ಹೈಗ್ರೌಂಡ್ಸ್ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ಮತ್ತು ನಗರದ 42ನೇ ಎಸಿಜೆಎಂ ಕೋರ್ಟ್ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ) ವಿಚಾರಣೆ ರದ್ದುಪಡಿಸುವಂತೆ ಕೋರಿ ಬಿಜೆಪಿ ಮುಖಂಡರಾದ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ರವಿಕುಮಾರ್ ಮತ್ತು ಉಮೇಶ್ ಶೆಟ್ಟಿ ಸೇರಿದಂತೆ 12 ಮಂದಿ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿ, ಹೈಗ್ರೌಂಡ್ಸ್ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತು.
Laxmi News 24×7