ಹೈಕೋರ್ಟ್ ಸೇರಿ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ತೀರ್ಮಾನ
ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠ ಸೇರಿದಂತೆ ಎಲ್ಲ ಜಿಲ್ಲಾ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಲು ತೀರ್ಮಾನಿಸಲಾಗಿದೆ.
ಇತ್ತೀಚೆಗೆ ನಡೆದ ಹೈಕೋರ್ಟ್ ನ್ಯಾಯಮೂರ್ತಿಗಳ ಫುಲ್ ಕೋರ್ಟ್ ಸಭೆಯಲ್ಲಿ ಈ ಕುರಿತಂತೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ನ್ಯಾಯಾಲಯದ ಸಭಾಂಗಣಗಳು, ಪ್ರಮುಖ ಸ್ಥಳಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಲಾಗುತ್ತದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ಅವರು ಸತ್ತೋಲೆ ಹೊರಡಿಸಿದ್ದಾರೆ.
Laxmi News 24×7