Breaking News

ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷದಿಂದ ಶೀಘ್ರವೇ ನಿರ್ಧಾರ

Spread the love

ಬೆಂಗಳೂರು: ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷವು ಶೀಘ್ರವೇ ನಿರ್ಧರಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಬೆಳಗ್ಗೆ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಸನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ರಾಜ್ಯಾಧ್ಯಕ್ಷರನ್ನಾಗಿ ನಿಮ್ಮನ್ನೇ ಮುಂದುವರೆಸುವ ವಿಶ್ವಾಸವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲ ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು, ಪಕ್ಷದ ಮುಖಂಡರ ಅಭಿಮತ ಪಡೆದುಕೊಂಡು ಯಾರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಒಳ್ಳೆಯದು ಎಂಬ ಕುರಿತು ಅಂತಿಮ ನಿರ್ಧಾರ ಶೀಘ್ರವೇ ಆಗುವ ವಿಶ್ವಾಸವಿದೆ. ನಾನು ಕಳೆದ ಒಂದೂಕಾಲು ವರ್ಷದಿಂದ ಕೊಟ್ಟಿರುವ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತನಾಗಿ ಶ್ರದ್ಧೆಯಿಂದ ನಿರ್ವಹಿಸುತ್ತಿದ್ದೇನೆ ಎಂಬ ಅನಿಸಿಕೆ ನನ್ನದು.

ಕೇಂದ್ರ ಮತ್ತು ರಾಷ್ಟ್ರೀಯ ನಾಯಕರಿಗೆ ಕೊಡಬೇಕಾದ ಮಾಹಿತಿಯನ್ನು ಕೊಡುತ್ತಾ ಬಂದಿದ್ದೇನೆ ಎಂದು ಹೇಳಿದರು.ನಾನು ಮತ್ತು ಪಕ್ಷದ ಕೆಲವು ಹಿರಿಯ ಮುಖಂಡರು ನಿನ್ನೆ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ಮಾರ್ಗದರ್ಶಕರಾದ ಅಮಿತ್ ಶಾ ಜೀ ಅವರನ್ನು ಭೇಟಿ ಮಾಡಿದ್ದೇವೆ. ಸುಮಾರು 25 ನಿಮಿಷಗಳ ಕಾಲ ಸುದೀರ್ಘವಾಗಿ ರಾಜ್ಯ ರಾಜಕಾರಣ, ಪ್ರಚಲಿತ ವಿದ್ಯಮಾನಗಳ ಕುರಿತು ಚರ್ಚಿಸಿದ್ದೇವೆ ಎಂದರು


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ