Breaking News

ಹೂತಿಟ್ಟ ಶವದ ಹಿಂದಿನ ಕಾರಣ ಬಯಲು

Spread the love

ಚಾಮರಾಜನಗರ: ಹೂತಿಟ್ಟ ಶವದಿಂದ ಮುಂಗೈ ಹೊರಬಂದ ಪ್ರಕರಣದಲ್ಲಿ ಮಹಿಳೆಯ ಗುರುತು ಪತ್ತೆಯಾಗಿದ್ದು, ಕೊಲೆಗೈದ ಪ್ರಿಯಕರ ಸಿಕ್ಕಿಬಿದ್ದಿದ್ದಾನೆ.

ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದ ಸುವರ್ಣಾವತಿ ನದಿ ದಂಡೆಯಲ್ಲಿ ಗುರುವಾರ ರಾತ್ರಿ ಶವದ ಮುಂಗೈ ಕಾಣಿಸಿಕೊಂಡಿತ್ತು. ಮೋಳೆ ಗ್ರಾಮದ ಸೋನಾಕ್ಷಿ (29) ಎಂಬಾಕೆಯ ಶವ ಇದಾಗಿದೆ. ಈಕೆಯನ್ನು ಪ್ರಿಯಕರ ಮಾದೇಶ(35) ಕೊಲೆ ಮಾಡಿ, ಹೂತು ಹಾಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೋನಾಕ್ಷಿ ತನ್ನ ಸೋದರ ಮಾವ ವಿಜಯ್​ ಕುಮಾರ್​ ಎಂಬವರನ್ನು ಮದುವೆಯಾಗಿದ್ದರೂ ಸಂಬಂಧದಲ್ಲಿ ವೈಮನಸ್ಸು ಮೂಡಿ, ಆಗಾಗ್ಗೆ ಮನೆ ಬಿಟ್ಟು ಹೋಗುತ್ತಿದ್ದಳು. ಜೊತೆಗೆ, ಮಾದೇಶನೊಂದಿಗೆ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದಳು.

ಗೋಡೆಗೆ ತಲೆಯನ್ನು ದೂಕಿ ಕೊಲೆ: ಇದಕ್ಕೂ ಮುನ್ನ, ಜೂನ್ 12ರಂದು ಮನೆ ಬಿಟ್ಟು ಹೋಗಿದ್ದ ಸೋನಾಕ್ಷಿಯನ್ನು ಪೊಲೀಸರು ಸಿಡಿಆರ್ ಮೂಲಕ ಪತ್ತೆ ಹಚ್ಚಿದ್ದರು. ತಾನು ಮತ್ತೆ ಪೊಲೀಸರ ಕೈಗೆ ಸಿಗಲು ಮಾದೇಶನೇ ಕಾರಣ ಎಂದು ಸೋನಾಕ್ಷಿ ಆಕ್ರೋಶ ಹೊರಹಾಕಿದ್ದಳು. ಈ ವಿಚಾರಕ್ಕೆ ಇಬ್ಬರ ನಡುವೆ ಕಲಹ ಉಂಟಾಗಿ, ಕೋಪದಿಂದ ಮಾದೇಶ ಸೋನಾಕ್ಷಿಯ ತಲೆಯನ್ನು ಹಿಡಿದು ಗೋಡೆಗೆ ದೂಕಿ ಕೊಲೆ ಮಾಡಿದ್ದ. ಬಳಿಕ, ಬೈಕ್​ನಲ್ಲಿ ಶವ ಸಾಗಿಸಿ ಹಳೇ ಹಂಪಾಪುರದ ನದಿ ದಂಡೆಯಲ್ಲಿ ಹೂತಿದ್ದಾಗಿ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣ ಬೇಧಿಸಿರುವ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಕೊಲೆ ಮತ್ತು ಸಾಕ್ಷ್ಯನಾಶದ ಆರೋಪದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ