Breaking News

ರಾಜ್ಯದಲ್ಲಿ ನಿರಂತರ ಮಾವು ಬೆಲೆ ಕುಸಿತ:

Spread the love

ಬೆಂಗಳೂರು: ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದಿರುವ ಹಿನ್ನೆಲೆಯಲ್ಲಿ ‘ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ’ಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರಡೆರೆಡು ರೂ.ಗಳಂತೆ ಒಟ್ಟು 4 ರೂ. ವ್ಯತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿವೆ. ಶನಿವಾರ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ವಿಡಿಯೋ‌ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಈ ಮೂಲಕ 2.5 ಲಕ್ಷ ಮೆಟ್ರಿಕ್​​ ಟನ್​ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ‌ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೃಷಿ-ತೋಟಗಾರಿಕೆ ಇಲಾಖೆ‌ ಅಧಿಕಾರಿಗಳು ಹಾಜರಿದ್ದರು. ಸೋಮವಾರ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ‌ಇದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ