ಬೆಂಗಳೂರು, (ಜೂನ್ 22): ಕರ್ನಾಟಕದಲ್ಲಿ ಸುಳ್ಳು ಸುದ್ದಿ ((Fake News) , ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು,
ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಕರಡು ಬಗ್ಗೆ ಚರ್ಚಿಸಲಾಗಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿದುಬಂದಿದೆ. ದ್ವೇಷ ಭಾಷಣವು ದೇಶದ ಜ್ಯಾತ್ಯತೀತ ಸಂರಚನೆಗೆ ಹಾನಿ ಮಾಡುವಷ್ಟು ಸಮರ್ಥವಾಗಿರುವ ಗಂಭೀರ ಅಪರಾಧ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಜತೆಗೆ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆ ಸೇರಿ ಹಲವೆಡೆ ದ್ವೇಷ ಭಾಷಣ, ಪ್ರಚೋದನೆಗಳು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಕೆಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಸಹ ಕ್ರಮ ಕೈಗೊಳ್ಳಲಾಗಿದೆ.ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ವಿಧೇಯಕ ಮಂಡನೆಗೆ ಈಗಾಗಲೇ ಕಳೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಇದಕ್ಕೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗಲಿದೆ.
ಕರ್ನಾಟಕ ತಪ್ಪು ಮಾಹಿತಿ ರಚನೆ ಮತ್ತು ನಕಲಿ ಸುದ್ದಿ ನಿಷೇಧ ಮಸೂದೆ 2025 ರ ಅಡಿಯಲ್ಲಿ, ಸಾಮಾಜಿಕ ಮಾಧ್ಯಮ ಬಳಕೆದಾರರು ಕಂಡುಬಂದಲ್ಲಿ ಸರ್ಕಾರವು ಏಳು ವರ್ಷಗಳವರೆಗೆ ಶಿಕ್ಷೆ ಅಥವಾ 10 ಲಕ್ಷ ರೂ. ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.
Laxmi News 24×7