Breaking News

ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಅವಿರೋಧ ಆಯ್ಕೆ

Spread the love

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ, ಇತರ 14 ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸದಸ್ಯರು ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಚಿತ್ರಕಲಾ ಪರಿಷತ್ತಿನ ಮೂರು ವರ್ಷಗಳ ಅವಧಿಯ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ ಹುದ್ದೆಗಳ ಚುನಾವಣೆ 29.06.2025ರ ಭಾನುವಾರದಂದು ನಿಗದಿಯಾಗಿತ್ತು. ಆದರೆ, ಪ್ರತಿಸ್ಪರ್ಧಿಗಳು ಸ್ಪರ್ಧೆಯಿಂದ ಹಿಂದೆ ಸರಿದರು. ಹೀಗಾಗಿ, ಆಯ್ಕೆಯಾಗಬೇಕಾದ ಸ್ಥಾನಗಳಿಗೆ ಸಮಾನವಾಗಿ ಅಭ್ಯರ್ಥಿಗಳು ಉಳಿದಿರುವುದರಿಂದ 15 ಮಂದಿ ಚಿತ್ರಕಲಾ ಪರಿಷತ್​​ಗೆ ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳೆಂದು ಘೋಷಿಸಲಾಗಿದೆ.

ಅದರಂತೆ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಮತ್ತೆ ಡಾ.ಬಿ.ಎಲ್.ಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಭಾಕರ್ ಟಿ. ಹಾಗೂ ಪ್ರೊ.ಅಪ್ಪಾಜಯ್ಯ ಕೆ.ಎಸ್ ಉಪಾಧ್ಯಕ್ಷರುಗಳಾಗಿ, ಡಾ.ಎನ್.ಲಕ್ಷ್ಮೀಪತಿ ಬಾಬು ಖಜಾಂಚಿಯಾಗಿ ಹಾಗೂ ಎಸ್.ಎನ್.ಶಶಿಧರ್ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆಗೊಂಡಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ