Breaking News

ಮನೆ ಹಂಚಿಕೆಗೆ ಹಣ: ಆಡಿಯೋ ರಿಲೀಸ್ ಮಾಡಿದ್ದ ಬಿಆರ್ ಪಾಟೀಲ್ ಕ್ಷೇತ್ರದ ವಿಡಿಯೋ ವೈರಲ್

Spread the love

ಕಲಬುರಗಿ, ಜೂನ್ 22: ಬಡವರಿಗೆ ಮನೆ ಬೇಕು ಅಂದರೆ ವಸತಿ ಇಲಾಖೆ ಅಧಿಕಾರಿಗಳಿಗೆ ಹಣ ಕೊಡಲೇಬೇಕು ಎಂದು ಕಾಂಗ್ರೆಸ್​ ಶಾಸಕ ಬಿ.ಆರ್.ಪಾಟೀಲ್ (BR Patil)​ ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಚೆಕ್ ಮಾಡಿದಾಗ ಅಫಜಲಪುರ ಕ್ಷೇತ್ರದಲ್ಲಿ ಹಣ ಕೊಡದಿದಕ್ಕೆ ಮನೆಗಳ ಸ್ಥಳಾಂತರ ಮಾಡಿರುವುದು ಬೆಳಕಿಗೆ ಬಂದಿತ್ತು.

ಇದೀಗ ಇದೇ ರೀತಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರ (Aland Assembly constituency) ವ್ಯಾಪ್ತಿಯ ಗ್ರಾಮದಲ್ಲಿ ಕೂಡ ರಿಯಾಲಿಟಿ ಚೆಕ್ ಮಾಡಿದ್ದು, ಮತ್ತೊಂದು ಸಾಕ್ಷಿ ಲಭ್ಯವಾಗಿದೆಹಣ ಕೊಟ್ಟರಷ್ಟೇ ಮನೆ ಅಂತಾ ಆರೋಪಿಸಿದ್ದ ಬಿ.ಆರ್.ಪಾಟೀಲ್​​,​ ಕೆಲ ಗ್ರಾಮ ಪಂಚಾಯಿತಿ ಹೆಸರು ಉಲ್ಲೇಖ ಮಾಡಿದ್ದರು.

ಅದರಲ್ಲಿ ಆಳಂದ ವಿಧಾನಸಭಾ ಕ್ಷೇತ್ರ ಕೂಡ ಒಂದು.  ರಿಯಾಲಿಟಿ ಚೆಕ್​ನಲ್ಲಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ದಂಗಾಪುರ ಗ್ರಾಮ ಪಂಚಾಯಿತಿನಲ್ಲಿ 200 ಮನೆ ಹಂಚಿಕೆ ಸಂಬಂಧ ನಡೆದ ಹಣಕಾಸಿನ ವ್ಯವಹಾರದ ವಿಡಿಯೋ ಸಾಕ್ಷಿ ಲಭ್ಯವಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ