Breaking News

ಮಳೆಯಿಂದ ಕ್ಷೀರಧಾರೆಯಂತೆ ಧುಮ್ಮಿಕ್ಕುತ್ತಿರುವ ಅಂಬೋಲಿ ಜಲಪಾತ

Spread the love

ಬೆಳಗಾವಿ: ಪಶ್ಚಿಮಘಟ್ಟದಲ್ಲಿ ಉತ್ತಮ ಮಳೆ ಆಗುತ್ತಿದ್ದು, ಬೆಳಗಾವಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಅದರಲ್ಲೂ ಕಡಿದಾದ ಹಚ್ಚ ಹಸಿರಿನ ಗುಡ್ಡದಿಂದ ಧುಮ್ಮಿಕ್ಕಿ ಹರಿಯುವ ಅಂಬೋಲಿ ಫಾಲ್ಸ್ ಜಲವೈಭವವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಜಲಪಾತಗಳತ್ತ ಹರಿದು ಬರುತ್ತಿದೆ.

ಹೌದು, ಮಾನ್ಸೂನ್ ಋತುವಿನಲ್ಲಿ ಪ್ರವಾಸಿಗರ ನೆಚ್ಚಿನ ತಾಣಗಳು ಎಂದರೆ ಜಲಪಾತಗಳು. ಅದರಲ್ಲೂ ಅಂಬೋಲಿ ಫಾಲ್ಸ್ ಪ್ರವಾಸಿಗರ ಪಾಲಿನ ಸ್ವರ್ಗ. ಹಸಿರು ಹೊದಿಕೆಯ ಗುಡ್ಡದಿಂದ ಧುಮ್ಮಿಕ್ಕಿ ಬರುವ ಜಲಧಾರೆ. ಹಾಲ್ನೊರೆಯಂತೆ ಹರಿಯುವ ನೀರಿನ ಜತೆಗೆ ಪ್ರವಾಸಿಗರ ಮೋಜು-ಮಸ್ತಿ. ಸುತ್ತಲೂ ಆವರಿಸಿದ ದಟ್ಟ ಮಂಜು, ಮೇಲೆ ಸುರಿಯುವ ಮಳೆ ನಿಸರ್ಗ ಪ್ರಿಯರಿಗೆ ಆಹ್ಲಾದಕರ ಅನುಭವ ನೀಡುತ್ತದೆ. ಶನಿವಾರ ವೀಕೆಂಡ್ ಹಿನ್ನೆಲೆ ಯುವಕ-ಯುವತಿಯರು ಅಷ್ಟೇ ಅಲ್ಲದೇ ಚಿಕ್ಕ ಮಕ್ಕಳಿಂದ ವೃದ್ಧರ ವರೆಗೆ ಎಲ್ಲರೂ ಕೂಡ ನಿಸರ್ಗದ ಸವಿ ಸವಿದು ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ಈ ಜಲಪಾತದ ದೃಶ್ಯ ವೈಭವ ಮತ್ತು ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಕೇವಲ ಕರ್ನಾಟಕ ಅಷ್ಟೇ ಅಲ್ಲದೇ ಮಹಾರಾಷ್ಟ್ರ, ಗೋವಾ, ಆಂಧ್ರ ಪ್ರದೇಶ ಸೇರಿ ಮತ್ತಿತರ ರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದಾರೆ.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ