Breaking News

ಬಾಗಲಕೋಟೆ: ಹಳ್ಳಕ್ಕೆ ಬಿದ್ದ ಬಾಲಕ, ಕಾಪಾಡಲು ಹೋದ ಯುವಕ ನೀರುಪಾಲು

Spread the love

ಬಾಗಲಕೋಟೆ: ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್​ ತಾಲೂಕಿನ ಚಿಕನಾಳ ಗ್ರಾಮದಲ್ಲಿ ಇಂದು ನಡೆದಿದೆ.

ಜಮೀನಿಗೆ ಹೋಗುತ್ತಿದ್ದಾಗ ಹಳ್ಳಕ್ಕೆ ಕಾಲು ಜಾರಿ ಬಿದ್ದ ಬಾಲಕ ಹಾಗೂ ಆತನನ್ನು ಕಾಪಾಡಲು ಹಳ್ಳಕ್ಕೆ ಇಳಿದ ಯುವಕ ಇಬ್ಬರೂ ನೀರು ಪಾಲಾಗಿದ್ದಾರೆ.

ಮಂಜುನಾಥ ಬಾಲಪ್ಪ ಬಂಡಿ (13) ಹಾಗೂ ಷಣ್ಮುಖಪ್ಪ ನಿಲಪ್ಪ ತಿಪ್ಪಣ್ಣವರ (30) ಮೃತಪಟ್ಟವರು. ಮೃತಪಟ್ಟ ಯುವಕ ಚಿಕನಾಳ ಗ್ರಾಮದ ನಿವಾಸಿಯಾಗಿದ್ದು, ಬಾಲಕ ಕೊಪ್ಪಳ ಜಿಲ್ಲೆ ಬಳೂಟಗಿ ಗ್ರಾಮದ ನಿವಾಸಿ.ಇಬ್ಬರ ಮೃತದೇಹಗಳನ್ನು ಹೊರತೆಗೆದು, ಗುಡೂರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ಈ ಬಗ್ಗೆ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ