Breaking News

ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್

Spread the love

ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್
ಬೆಳಗಾವಿಯ ಉಜ್ವಲ ನಗರ, ಶಾಮ್ಸ್ ಕಾಲೋನಿ ಹಾಗೂ ಅಮನ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಆಸೀಫ್ ಸೇಠ್ ಚಾಲನೆ ನೀಡಿ ಜನತಾದರ್ಶನದಲ್ಲಿ ಅಹವಾಲು ಸ್ವೀಕರಿಸಿದರು
ಹಲವಾರು ವರ್ಷಗಳಿಂದ ಬೆಳಗಾವಿ ಉಜ್ವಲ ನಗರದಲ್ಲಿ ರಸ್ತೆಗಳು ಹದಗೆಟ್ಟಿದ್ದವು ಒಳಚರಂಡಿ ದುರಸ್ತಿ ಸೇರಿದಂತೆ ಹಲವಾರು ಸಮಸ್ಯೆಗಳಿದ್ದವು. ಸೋಮವಾರ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರು ಉಜ್ವಲ ನಗರದ 9 ನೇ ಕ್ರಾಸ್ ನಿಂದ ಮುಖ್ಯರಸ್ತೆಯ ಕೊನೆಯವರೆಗೆ ಪೇವರ್ಸ್ ಅಳವಡಿಕೆಗೆ ಮತ್ತು ಒಳಚರಂಡಿ ದುರಸ್ತಿ ಕಾಮಗಾರಿಗೆ ಚಾಲನೆ ನೀಡುವುದರ ಮೂಲಕ ಸಮಸ್ಯೆಗಳಿಗೆ ಮುಕ್ತಿ ನೀಡಿದರು.
ನಂತರ ಅವರು ಶಾಮ್ಸ ಕಾಲೋನಿಯ ಅಮನ್ ನಗರದಲ್ಲಿ ರಸ್ತೆ ದುರಸ್ತಿ ಒಳಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದರು
ಇದೇ ಸಂದರ್ಭದಲ್ಲಿ ಜನತಾದರ್ಶನ ನಡೆಸಿದರು. ಅವರಿಗೆ ಸ್ಥಳೀಯ ನಾಗರಿಕರು, ವೈಯಕ್ತಿಕ ಸಮಸ್ಯೆಗಳನ್ನು ಹಾಗೂ ನೀರು ಸರಬರಾಜು ರಸ್ತೆ ದುರಸ್ತಿ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಹೇಳಿಕೊಂಡು ಮನವಿ ಸಲ್ಲಿಸಿದರು. ಶಾಸಕರು ಕೆಲವು ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಕರೆ ಮಾಡಿ ಸ್ಥಳದಲ್ಲೇ ಪರಿಹರಿಸಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕರನ್ನು ಸ್ಥಳೀಯ ನಿವಾಸಿಗಳು ಅಭಿನಂದಿಸಿದರು. ಈ ಸಂದರ್ಭದಲ್ಲಿ ಅನೇಕ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು

Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ