Breaking News

ಬಿಜೆಪಿಯವರಿಗೆ ಅಭಿವೃದ್ಧಿ ವಿಚಾರದಲ್ಲಿ ನಮ್ಮನ್ನು ಟೀಕಿಸುವ ಯಾವ ನೈತಿಕ ಹಕ್ಕೂ ಇಲ್ಲ:ಸಿದ್ಧರಾಮಯ್ಯ

Spread the love

ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪುನರುಚ್ಚರಿಸಿದರು.

ಸೋಮವಾರ ಗ್ರಾಮೀಣ ಕ್ಷೇತ್ರದ ತಾಲೂಕಿನ ಯರಗೇರಾ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ, ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಇತರೆ ನಿಗಮಗಳಿಂದ ಸೌಲಭ್ಯ ವಿತರಣೆ, 371(ಜೆ) ದಶಮಾನೋತ್ಸವ ಮತ್ತು 936 ಕೋಟಿಗಳ ವೆಚ್ಚದ ವಿವಿಧ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವೃದ್ಧಿ ಮಾಡಲಿಲ್ಲ. ಈಗ ಕಾಂಗ್ರೆಸ್ ಮಾಡುತ್ತಿರುವ ಅಭಿವೃದ್ಧಿಯನ್ನು ಬಿಜೆಪಿಯವರು ಸಹಿಸದೆ ಸುಳ್ಳಿನ ಸರಮಾಲೆ ಹಂಚುತ್ತಾ ತಿರುಗುತ್ತಿದ್ದಾರೆ. ನಾವು ಈ ಚುನಾವಣೆ ವೇಳೆ 560 ಭರವಸೆಗಳನ್ನು ನೀಡಿದ್ದೆವು. ಇದರಲ್ಲಿ 235 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

2013ರಿಂದ 2018ರವರೆಗೆ ನಾವು ಆಡಳಿತ ನಡೆಸಿಕೊಟ್ಟ ಭರವಸೆಗಳೆಲ್ಲವನ್ನೂ ಈಡೇರಿಸಿ ಪ್ರಣಾಳಿಕೆಯಲ್ಲಿ ಇಲ್ಲದ ಹೆಚ್ಚುವರಿ 30 ಭರವಸೆಗಳನ್ನು ಈಡೇರಿಸಿ ದಾಖಲೆ ಮಾಡಿದ್ದೇವೆ. ಆದರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದೇನು ಎಂದು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಚಿನ್ನ, ಬೆಳ್ಳಿ, ಅಕ್ಕಿ, ಬೇಳೆ, ಅಡಿಗೆ ಎಣ್ಣೆ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ರಸಗೊಬ್ಬರ ಎಲ್ಲದರ ಬೆಲೆ ಹೆಚ್ಚಿಸಿದ್ದು ಮೋದಿ ಸರ್ಕಾರ. ಆದರೂ, ಬಿಜೆಪಿಯ ನಾಯಕರು ರಾಜ್ಯದ ಜನರ ಎದುರು ಸುಳ್ಳು ಹೇಳಿ ನಾಚಿಕೆ ಇಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಸಿಎಂ ಟೀಕಿಸಿದರು.

ಇವತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರಣವಾಗಿದ್ದು 371ಜೆ. ಇದನ್ನು ಜಾರಿಗೆ ತಂದಿದ್ದು ಮಲ್ಲಿಕಾರ್ಜುನ ಖರ್ಗೆ, ಧರಂ ಸಿಂಗ್ ಅವರ ನೇತೃತ್ವದ ಹೋರಾಟ ಮತ್ತು ಕೇಂದ್ರದಲ್ಲಿದ್ದ ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ. ಈ 371ಜೆ ಜಾರಿಗೊಳಿಸಲು ಬಿಜೆಪಿ ಸಂಪೂರ್ಣ ವಿರುದ್ಧವಿತ್ತು. ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ ಆಗಿದ್ದಾಗ ಉಪಪ್ರಧಾನಿ ಅಡ್ವಾಣಿ ಅವರು 371ಜೆ ಜಾರಿ ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಬಿಜೆಪಿಯವರಿಗೆ ಅಭಿವೃದ್ಧಿ ವಿಚಾರದಲ್ಲಿ ನಮ್ಮನ್ನು ಟೀಕಿಸುವ ಯಾವ ನೈತಿಕ ಹಕ್ಕೂ ಇಲ್ಲ ಎಂದರು.


Spread the love

About Laxminews 24x7

Check Also

ಎಲ್ಲರೂ ಕೈ ಜೋಡಿಸುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಚೈತನ್ಯ ಕುಲಕರ್ಣಿ ಪ್ರಯತ್ನ ಸಂಘಟನೆ 15ನೇ ವಾರ್ಷಿಕೋತ್ಸವ ಉದ್ಘಾಟನೆ

Spread the love ಬೆಳಗಾವಿ : ರಾಜಕಾರಣಿಗಳಿಂದಲೇ ಎಲ್ಲವನ್ನೂ ನಿರೀಕ್ಷೆ ಮಾಡುವ ಬದಲು ಎಲ್ಲರೂ ಸೇರಿ ಕೆಲಸ ಮಾಡುವುದರಿಂದ ಉತ್ತಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ