Breaking News

ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿದ ಇಬ್ಬರು ಅಪ್ರಾಪ್ತರ ಬಂಧನ

Spread the love

ದಾವಣಗೆರೆ: ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಹದಡಿ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ.

ಮನೆ ಮುಂದೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನು ನೆರೆಹೊರೆಯ 15 ಮತ್ತು 17 ವರ್ಷದ ಅಪ್ರಾಪ್ತ ಬಾಲಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಮಗಳು ಕಾಣಿಸದ ಹಿನ್ನೆಲೆ ತಾಯಿ ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಕೃತ್ಯ ಬಯಲಿಗೆ ಬಂದಿದೆ. ನಂತರ ಕುಟುಂಬಸ್ಥರು ಬಾಲಕರ ವಿರುದ್ಧ ಪೋಕ್ಸೋ ಕೇಸ್​ ದಾಖಲಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾದ ಏಳು ವರ್ಷದ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಆರೋಪಿ ಬಾಲಕರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ