Breaking News

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡವರು, ವಿತರಿಸಿದವರ ವಿರುದ್ದ ಕೈಗೊಂಡ ಕ್ರಮದ ಕುರಿತು ವರದಿ ಸಲ್ಲಿಸಿ:ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

Spread the love

ಬೆಂಗಳೂರು: ರಾಜ್ಯದಲ್ಲಿ ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣತ್ರಗಳನ್ನು ಪಡೆದುಕೊಂಡವರ ಹಾಗೂ ಅವುಗಳನ್ನು ವಿತರಿಸಿದವರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರಾಜ್ಯ ಎಸ್ಸಿ-ಎಸ್ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಪ್ರಧಾನ ಕಾರ್ಯದರ್ಶಿ ಮಾರಪ್ಪ ನಾಯಕ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡವರ ಹಾಗೂ ಅದಕ್ಕೆ ಕಾರಣರಾದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಈ ಹಿಂದೆ ಹೈಕೋರ್ಟ್ ಆದೇಶಿಸಿತ್ತು. ಅದರಂತೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ನಿರ್ದೇಶಕರು ನ್ಯಾಯಾಲಯಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಬೇಕಿತ್ತು. ಆದರೆ, ಈವರೆಗೆ ವರದಿ ಸಲ್ಲಿಸಿಲ್ಲ ಎಂದು ಪೀಠಕ್ಕೆ ವಿವರಿಸಿದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ