Breaking News

ಖುದ್ದು ಅಮಿತ್ ಶಾ ಅವರೇ ಯಡಿಯೂರಪ್ಪ ಅವರನ್ನು ದೆಹಲಿಗೆ ಆಹ್ವಾನ

Spread the love

ಬೆಂಗಳೂರು, ಡಿ.19- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ದೆಹಲಿಗೆ ಆಹ್ವಾನಿಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಪುಟ ವಿಸ್ತರಣೆಯ ಚಟುವಟಿಕೆಗಳು ಮತ್ತೆ ಗರಿಗೆದರುವಂತೆ ಮಾಡಿದೆ. ಸಂಪುಟ ವಿಸ್ತರಣೆಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಲು ಮುಖ್ಯ ಮಂತ್ರಿ ಯಡಿಯೂರಪ್ಪ ಮೂರು ಬಾರಿ
ದೆಹಲಿಗೆ ಭೇಟಿ ನೀಡಿದ್ದರಾದರೂ ಪ್ರಯೋ ಜನವಾಗಲಿಲ್ಲ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಭೇಟಿಗೆ ಸಮಯವನ್ನೇ ನೀಡಿರಲಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ ನೆನೆಗುದಿಗೆ ಬಿದ್ದಿತ್ತು. ಈಗ ಖುದ್ದು ಅಮಿತ್ ಶಾ ಅವರೇ ಯಡಿಯೂರಪ್ಪ ಅವರನ್ನು ದೆಹಲಿಗೆ ಆಹ್ವಾನಿಸಿದ್ದಾರೆ. ಡಿ.28 ಅಥವಾ 29ರಂದು ಯಡಿಯೂರಪ್ಪ ಅವರು ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ಈ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ