Breaking News

ಬೆಳಗಾವಿ, ಖಾನಾಪುರ, ಕಿತ್ತೂರು ಶಾಲಾ ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಣೆ

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಹಾಮಳೆ ಬುಧವಾರವೂ ಮುಂದುವರೆದಿರುವ ಹಿನ್ನೆಲೆಯಲ್ಲಿ ಜೂನ್ 26ರಂದು ಗುರುವಾರ ಬೆಳಗಾವಿ, ಖಾನಾಪುರ ಮತ್ತು ಕಿತ್ತೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹೌದು, ಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಹಾಗಾಗಿ, ಬುಧವಾರ ಎರಡು ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಳೆ ಆರ್ಭಟ ಇನ್ನೂ ಜೋರಾಗಿದ್ದರಿಂದ ಜಿಲ್ಲೆಯ ಮೂರು ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ಮನೆ ಬಿಟ್ಟು ಹೊರಗೆ ಬರಲು ಕೂಡ ಸಾಧ್ಯವಾಗುತ್ತಿಲ್ಲ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಅತೀ ಹೆಚ್ಚು ಮಳೆ ಆಗುತ್ತಿರುವ ಬೆಳಗಾವಿ, ಖಾನಾಪುರ ಮತ್ತು ಕಿತ್ತೂರು ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.


Spread the love

About Laxminews 24x7

Check Also

belagavi: ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಆದ್ಯತೆ

Spread the loveಸತ್ತಿಗೇರಿ:  ಸವದತ್ತಿ ಯಲ್ಲಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ವಿಶ್ವಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ