ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಿ; ಶಶಿಧರ ಕುರೇರ್
ಇಂದು ಇಂಟರ್’ನ್ಯಾಷನಲ್ ಡ್ರಗ್ ಅಬ್ಯೂಸ್ ಡೇ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಾದ್ಯಂತ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು.
ಇಂದು ಬಾಗಲಕೋಟೆ ಜಿಲ್ಲೆಯಾದ್ಯಂತ ವಿಶ್ವ ಮಾದಕ ವಸ್ತು ವಿರೋಧಿ ದಿನದ ಹಿನ್ನೆಲೆ ಜಿಲ್ಲೆಯ ಒಟ್ಟು 4 ಲಕ್ಷ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು. ಈ ವೇಳೆ 1600 ಪೊಲೀಸ್, ಶಿಕ್ಷಣ ಇಲಾಖೆ, ಅರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಜಿಪಂ ಸಿಇಓ ಶಶಿಧರ ಕುರೇರ ಅವರು ಡ್ರಗ್ ಮುಕ್ತ ಸಮಾಜವನ್ನು ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕು. ಯಾರಿಗಾದರೂ ಮಾದಕ ವಸ್ತು ಮಾರಾಟದ ಮಾಹಿತಿ ದೊರೆತಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಯುವಕರು ಮಾದಕ ವಸ್ತುಗಳಿಗೆ ಬಲಿಯಾಗಬಾರದು ಎಂದರು.
ಈ ಸಂದರ್ಭದಲ್ಲಿ ಬಾಗಲಕೋಟೆಯ ಜಿಲ್ಲಾಧಿಕಾರಿಗಳಾದ ಸಂಗಪ್ಪ ಎಂ, ಎಸ್ಪಿ ಅಮರನಾಥ ರೆಡ್ಡಿ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.
Laxmi News 24×7