Breaking News

ಸಮಾಧಾನ, ಅಸಮಾಧಾನ ಅಂತಾ ನಂದೇನೂ ಇಲ್ಲ:ಬಿ.ಆರ್.ಪಾಟೀಲ್

Spread the love

ಬೆಂಗಳೂರು : ಸಮಾಧಾನ, ಅಸಮಾಧಾನ ನಂದೇನೂ ಇಲ್ಲ. ನಡೆದಿದ್ದನ್ನು ಅವರಿಗೆ ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಶಾಸಕ ಬಿ. ಆರ್. ಪಾಟೀಲ್ ತಿಳಿಸಿದ್ದಾರೆ.

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಏನೆಲ್ಲ ಹೇಳಬೇಕಾಗಿತ್ತೋ ಹೇಳಿದ್ದೇನೆ. ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಎಲ್ಲ ವಿವರವಾಗಿ ಹೇಳಿದ್ದೇನೆ ಎಂದಿದ್ದಾರೆ.

ಅವರು ಸಮಾಧಾನದಿಂದ ನಮ್ಮ ವಿಚಾರಗಳನ್ನು ಕೇಳಿದ್ದಾರೆ. ಅವರು ಏನು ಕ್ರಮ ತೆಗೆದುಕೊಳ್ಳುತ್ತಾರೆ ಅವರಿಗೆ ಬಿಟ್ಟದ್ದು. ಅವರು ಯೋಚನೆ ಮಾಡಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.ಇದು ಸರಿ ಹೋಗಬಹುದು ಎಂಬ ವಿಶ್ವಾಸ ಇದೆಯಾ? ಎಂಬ ಪ್ರಶ್ನೆಗೆ, ಅವರಿಗೆ ಕೇಳಿ ಎಂದು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Spread the love ಬೆಂಗಳೂರು: ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ ಕಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ