4 ಹುಲಿಗಳ ಅಸಹಜ ಸಾವು
ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿವೆ. ಹಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.
ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದೆ. 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.
Laxmi News 24×7