Breaking News

4 ಹುಲಿಗಳ ಅಸಹಜ ಸಾವು

Spread the love

4 ಹುಲಿಗಳ ಅಸಹಜ ಸಾವು

ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿವೆ. ಹಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದೆ. 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ