Breaking News

45 ಕೋಟಿ ಮೌಲ್ಯದ 4 ಸಾವಿರ ಕೆ.ಜಿ ಡ್ರಗ್ಸ್ ನಾಶ, ದಂಧೆಯಲ್ಲಿದ್ದ 200ಕ್ಕೂ ಹೆಚ್ಚು ವಿದೇಶಿಗರ ಗಡಿಪಾರು: ಗೃಹ ಸಚಿವ ಜಿ.ಪರಮೇಶ್ವರ್

Spread the love

ಬೆಂಗಳೂರು: ಕಳೆದೊಂದು ವರ್ಷದಲ್ಲಿ 4 ಸಾವಿರ ಕೆ.ಜಿ. ಗಾಂಜಾ ಸೇರಿದಂತೆ 45 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ. ವಿದೇಶಿ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ತೊಡಗುತ್ತಿದ್ದು, 200ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್​ ತಿಳಿಸಿದರು.

ಬೆಂಗಳೂರು ನಗರ ಪೊಲೀಸ್ ವತಿಯಿಂದ‌ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇದೇ ವೇಳೆ ಸಾವಿರಾರು ವಿದ್ಯಾರ್ಥಿಗಳಿಗೆ Say No drugs ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.

ಯುವ ಜನರಲ್ಲಿ ಅರಿವು: ನಗರದಲ್ಲಿ ಕಳೆದ ಒಂದು ವರ್ಷದಲ್ಲಿ ವಶಪಡಿಸಿಕೊಂಡಿದ್ದ 45 ಕೋಟಿ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದ್ದು, ಅದನ್ನು ಪರಿಸರಕ್ಕೆ ಮಾರಕವಾಗದಂತೆ ವೈಜ್ಞಾನಿಕವಾಗಿ ನಾಶಪಡಿಸಲಾಗಿದೆ. ಡ್ರಗ್ಸ್ ದಂಧೆ ಮಟ್ಟ ಹಾಕಲು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಬರೀ ಕಾನೂನಿಂದ ಮಾತ್ರ ಇದನ್ನು ನಿಲ್ಲಿಸಲು ಸಾಧ್ಯವಿಲ್ಲ. ಯುವಕರ ಮನಸ್ಸನ್ನು ಜಾಗೃತ ಮಾಡಲು ಕಾರ್ಯಕ್ರಮಗಳನ್ನು ರೂಪಿಸಿ, ಅವರಿಗೆ ಈ ಕುರಿತು ತಿಳಿ ಹೇಳಲಾಗುತ್ತಿದೆ. ಆನಂತರವೂ ಮುಂದುವರಿದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ವಿಶ್ವದಲ್ಲಿ ಮಾದಕ ವಸ್ತುಗಳು ಮತ್ತು ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಆಂದೋಲನ ಮಾಡಲಾಗುತ್ತಿದೆ. ಡ್ರಗ್ಸ್‌ನಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕಾಲೇಜ್​ಗಳಲ್ಲಿ ಮಾದಕ ದ್ರವ್ಯ ವಿರೋಧಿ ಸಮಿತಿ ರಚಿಸಲಾಗುತ್ತಿದೆ. ಇದರಿಂದ ಆಗುವ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮಗಳನ್ನು ಜನರು ಅರ್ಥ ಮಾಡಿಕೊಳ್ಳಬೇಕು‌ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ