Breaking News

ತುಂಬಿ ಹರಿಯುತ್ತಿರುವ ಹಾಲಾತ್ರಿ ಹಳ್ಳದಲ್ಲಿ ಥಾರ್ ದಾಟಿಸಿದ ಚಾಲಕ

Spread the love

ಬೆಳಗಾವಿ : ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಖಾನಾಪುರದ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇದರ ನಡುವೆಯೂ ಒಬ್ಬ ಚಾಲಕ ಹರಿಯುವ ನೀರಿನಲ್ಲೇ ವಾಹನ ದಾಟಿಸಿ, ದುಸ್ಸಾಹಸ ಪ್ರದರ್ಶಿಸಿರುವ ವಿಡಿಯೋ ವೈರಲ್ ಆಗಿದೆ.

ಬೆಳಗಾವಿ, ಖಾನಾಪುರ, ಹೆಮ್ಮಡಗಾ-ಅನಮೋಡ ಮಾರ್ಗವಾಗಿ ಗೋವಾ ಸಂಪರ್ಕಿಸುವ ರಸ್ತೆಯಲ್ಲಿರುವ ಹಾಲಾತ್ರಿ ಹಳ್ಳ ತುಂಬಿ‌ ಹರಿಯುತ್ತಿದೆ. ಹಳ್ಳದ ಸೇತುವೆಯ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಆದರೂ ಸಹ ತುಂಬಿ ಹರಿಯುತ್ತಿರುವ ಹಳ್ಳದ ಮೇಲೆಯೇ ವಾಹನ ಸವಾರರು ಸರ್ಕಸ್ ಮಾಡುತ್ತಿದ್ದಾರೆ.

ಇದೀಗ ಓರ್ವ ಥಾರ್ ಚಾಲಕ ಅಪಾಯವನ್ನು ಲೆಕ್ಕಿಸದೆ ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಿಸಿರುವುದು ತೀವ್ರ ಟೀಕೆಗೆ ಗ್ರಾಸವಾಗಿದೆ. ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಕೊಂಡು ಹೋದರೆ ಜೀವವನ್ನೆ ಕಳೆದುಕೊಳ್ಳುವ ಸಾಧ್ಯತೆಯಿದೆ. ಇನ್ನು ಇಷ್ಟೊಂದು ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ವಾಹ‌ನ ಸಂಚಾರ ನಿರ್ಬಂಧಿಸಲಾಗಿದೆ. ಆದರೂ ಕೆಲವರು ಉದ್ಧಟತನ ಪ್ರದರ್ಶಿಸುತ್ತಿದ್ದಾರೆ.

ಖಾನಾಪುರ ತಾಲೂಕಿನ ಬಹುತೇಕ‌ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ದೂರದಲ್ಲೇ ನಿಂತು ಪ್ರಕೃತಿ ಸೌಂದರ್ಯ ಸವಿಯುವುದು ಬಿಟ್ಟು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವ ರೀತಿಯಲ್ಲಿ ಜಲಪಾತಗಳಲ್ಲಿ ಯುವಕರು ದುಸ್ಸಾಹಸ ಮೆರೆಯುತ್ತಿದ್ದಾರೆ.

ಚಿಕಲೆ ಜಲಪಾತದ ಅಡಿಯಲ್ಲಿ ನಿಂತು ಯುವಕರು ಡ್ಯಾನ್ಸ್ ಮಾಡುವ ವಿಡಿಯೋ ಕೂಡ ವೈರಲ್ ಆಗಿದೆ. ಮಳೆಗಾಲದಲ್ಲಿ ಅನಾಹುತಗಳು ಸಂಭವಿಸದಿರಲಿ ಎಂದು ಮುಂಜಾಗ್ರತೆ ವಹಿಸಿರುವ ಜಿಲ್ಲಾಡಳಿತ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಅದೇ ರೀತಿ ಜಲಪಾತ, ನದಿ, ಸೇತುವೆ, ಹಳ್ಳ-ಕೊಳ್ಳದಲ್ಲಿ ಈ ರೀತಿ ದುಸ್ಸಾಹಸದಲ್ಲಿ ತೊಡಗಿದವರಿಗೆ ಬಿಸಿ ಮುಟ್ಟಿಸುವ ಕೆಲಸವನ್ನೂ ಮಾಡಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ