Breaking News

ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ

Spread the love

ಹಾವೇರಿ, ಜೂನ್​ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ  ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್ ನೀಡಲು ಸರ್ಕಾರಿ ನೌಕರ ಹಣಕ್ಕೆ ಬೇಡಿಕೆ ಇಟ್ಟ ಹಿನ್ನಲೆ ಮಹಾಂತೇಶ ಬಡಿಗೇರ ಎಂಬುವವರು ತಮ್ಮ ಪತ್ನಿ ಮಾಂಗಲ್ಯ ಸರವನ್ನು ಅಡವಿಟ್ಟು ಹಣ ನೀಡಿದ್ದಾರೆ. ಆದರೆ ಇದುವರೆಗೂ ಬಿಲ್ ಮಂಜೂರಾಗಿಲ್ಲ ಎಂದು ತಹಶೀಲ್ದಾರ್ ಬಳಿ ಅಳಲು ತೊಡಿಕೊಂಡಿದ್ದಾರೆ.

ತಹಶೀಲ್ದಾರ್​ಗೆ ದೂರು 

ಹಾವೇರಿ ತಾಲೂಕು ಬೆಳವಿಗೆ ಗ್ರಾಮದ ಮಹಾಂತೇಶ್​, ಸಾಲ ಮಾಡಿ ಮನೆ ಕಟ್ಟಿದ್ದರಿಂದ ಬಿಲ್ ಅನಿವಾರ್ಯವಾಗಿತ್ತು. ಹೀಗಾಗಿ ಪತ್ನಿಯ ಮಾಂಗಲ್ಯ ಸರವನ್ನು ಅಡವಿಟ್ಟು ನೌಕರ ಮದನ್ ಮೋಹನ್‌ಗೆ 20 ಸಾವಿರ ರೂ ಲಂಚ ನೀಡಿದ್ದಾರೆ. ಆದರೆ ಇದುವರೆಗೂ ಬಿಲ್ ಮಂಜೂರಾಗಿಲ್ಲ. ಈ ಬಗ್ಗೆ ತಹಶೀಲ್ದಾರ್ ಶರಣಮ್ಮ ಅವರನ್ನು ಭೇಟಿಯಾಗಿ ಅಳಲು ತೊಡಿಕೊಂಡಿದ್ದು, ಜೊತೆಗೆ ದೂರು ಸಹ ನೀಡಿದ್ದಾರೆ.

ಸಂತ್ರಸ್ತನ ದೂರಿಗೆ ಸ್ಪಂದಿಸಿದ ತಹಶೀಲ್ದಾರ್ ಶರಣಮ್ಮ, ಹಣ ನೀಡಿರುವ ದಾಖಲೆಗಳನ್ನು ನನಗೆ ನೀಡಿ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುತ್ತೇವೆ. ನೌಕರನ ವಿರುದ್ಧ ಕಠಿಣ ಕ್ರಮಕ್ಕೆ ಹಿರಿಯ ಅಧಿಕಾರಿಗಳಿಗೆ ಶಿಫಾರಸು ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ನೆರೆ ಸಂದರ್ಭದಲ್ಲಿ ಮಹಾಂತೇಶ್ ಅವರ ಮನೆ​ ಕುಸಿದು ಬಿದ್ದಿತ್ತು. ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಮಂಜೂರು ಸಿಕ್ಕಿತ್ತು. ಹೀಗಾಗಿ ಮಹಾಂತೇಶ್​ ಅವರು ಸಾಲ ಮಾಡಿ ಮನೆ ನಿರ್ಮಾಣ ಆರಂಭಿಸಿದ್ದರು. ಆದರೆ, ಬ್ಯಾಂಕ್ ಖಾತೆಗೆ ಯಾವುದೇ ಬಿಲ್‌ ಬಂದಿರಲಿಲ್ಲ. ಬಿಲ್‌ಗಾಗಿ ಹಾವೇರಿ ತಹಶೀಲ್ದಾರ್ ಕಚೇರಿಗೆ ಹಲವು ವರ್ಷಗಳಿಂದ ಅಲೆದಾಡುತ್ತಿದ್ದರು. ಬಿಲ್ ಮಂಜೂರು ಮಾಡುವಂತೆ ಮನವಿ ಕೂಡ ಸಲ್ಲಿಸಿದ್ದರು.


Spread the love

About Laxminews 24x7

Check Also

ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಸಂಸದ ಬಸವರಾಜ ಬೊಮ್ಮಾಯಿ

Spread the loveಹಾವೇರಿ : ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ, ಸಂಸದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ